ಸಮೀಕ್ಷೆಗೆ ಶಿಕ್ಷಕರು ಬಾರದಿದ್ದರೆ ಈ ಕೆಲಸ ಮಾಡಿ – ರಾಜ್ಯದ ಜನತೆಯ ಗಮನಕ್ಕೆ ಶಿಕ್ಷಕರಿಗೆ ನೆರವಾಗಿ……

Suddi Sante Desk
ಸಮೀಕ್ಷೆಗೆ ಶಿಕ್ಷಕರು ಬಾರದಿದ್ದರೆ ಈ ಕೆಲಸ ಮಾಡಿ – ರಾಜ್ಯದ ಜನತೆಯ ಗಮನಕ್ಕೆ ಶಿಕ್ಷಕರಿಗೆ ನೆರವಾಗಿ……

ಬೆಂಗಳೂರು

ರಾಜ್ಯದ ಜನತೆ ಗಮನಕ್ಕೆ  ಜಾತಿ ಗಣತಿ ಸಮೀಕ್ಷೆ’ ಮಾಡಲು ನಿಮ್ಮ ಮನೆಗೆ ಶಿಕ್ಷಕರು ಬಾರದಿದ್ರೆ ತಕ್ಷಣ ಹೀಗೆ ಮಾಡಿ.ಹೌದು ರಾಜ್ಯಾದ್ಯಂತ ಜಾತಿ ಗಣತಿ ಸಮೀಕ್ಷೆ ಗಡುವು ಅ.12 ರವರೆಗೆ ವಿಸ್ತರಣೆ ಮಾಡ ಲಾಗಿದ್ದು, ಆನ್ ಲೈನ್ ನಲ್ಲಿ ಕೂಡ ಸಮೀಕ್ಷೆಯಲ್ಲಿ ಭಾಗಿಯಾಗಬಹುದಾಗಿದೆ.ಗಣತಿದಾರರು ತಮ್ಮ ಮನೆಗೆ ಬರುವವರೆಗೆ ಕಾಯದೇ ಸಾರ್ವಜನಿಕರು ತಮಗೆ ಅನುಕೂಲವಾದ ಅವಧಿಯಲ್ಲಿ ಯಾವುದೇ ಪ್ರದೇಶ ದಿಂದ ಸಮೀಕ್ಷೆಯಲ್ಲಿ ಭಾಗವಹಿಸಬಹುದಾಗಿದ್ದು,

ತಾವೇ ತಮ್ಮ ಮಾಹಿತಿಯನ್ನು ದಾಖಲು ಮಾಡುವುದ ರಿಂದ, ಯಾವುದೇ ಗೊಂದಲಗಳಿಲ್ಲದೆ ನಿಖರವಾಗಿ ತಮ್ಮ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿಯನ್ನು ಸಮೀಕ್ಷೆಯಲ್ಲಿ ತಿಳಿಸಲು ಸಾಧ್ಯವಾಗಲಿದೆ.ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿ ಗತಿಗಳ ಕುರಿತು ನಿಖರವಾದ ಮಾಹಿತಿ ಸಂಗ್ರಹಿಸಲು ಈಗಾಗಲೇ ರಾಜ್ಯಾದ್ಯಂತ ಸಮೀಕ್ಷೆ ಕಾರ್ಯ ಆರಂಭ ಗೊಂಡಿದ್ದು ಈ ಸಮೀಕ್ಷೆಯು ಅಕ್ಟೋಬರ್ 12 ರವರೆಗೆ ನಡೆಯಲಿದೆ.

ಈಗಾಗಲೇ ಗುರುತಿಲಾಗಿರುವ ಎಲ್ಲಾ ಮನೆಗಳಿಗೆ ಗಣತಿದಾರರು ಭೇಟಿ ನೀಡಿ, ಗಣತಿ ಕಾರ್ಯ ನಡೆಸು ತ್ತಿದ್ದು, ಸಾರ್ವಜನಿಕರು ಕೂಡ ಸ್ವಯಂ ಆಗಿ ತಮ್ಮ ಮನೆಯ ಗಣತಿ ಮಾಡಿಕೊಳ್ಳಲು ಅನುಕೂಲವಾ ಗುವಂತೆ ಸೌಲಭ್ಯವನ್ನು ಸಿದ್ಧಪಡಿಸಲಾಗಿದೆ.

ಸಾರ್ವಜನಿಕರು https://kscbcselfdeclaration.karnataka.gov.in/ ನಲ್ಲಿ ಸ್ವಯಂ ಮಾಹಿತಿಯನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಲಿಂಕ್ ಅನ್ನು ಕ್ಲಿಕ್ ಮಾಡಿದಾಗ ತೆರೆದುಕೊಳ್ಳುವ ಪುಟದಲ್ಲಿ ʼನಾಗರಿಕʼ ಎಂಬುದನ್ನು ಆಯ್ಕೆ ಮಾಡಿದ್ದಲ್ಲಿ ಲಾಗಿನ್ನಲ್ಲಿ ಮುಂದುವರೆಯಲು ಕೋರಲಾಗುತ್ತದೆ. ನಂತರದಲ್ಲಿ ತಮ್ಮ ಮೊಬೈಲ್ ಸಂಖ್ಯೆಯನ್ನು ನೀಡಿದ್ದಲ್ಲಿ, ಒಟಿಪಿ ಬರಲಿದ್ದು, ಅದನ್ನು ದಾಖಲು ಮಾಡಬೇಕಾಗು ತ್ತದೆ.ನಂತರ ತೆರೆಯುವ ಪುಟದಲ್ಲಿ ತಮ್ಮ ಸಮೀಕ್ಷೆಯ ಸ್ಥಿತಿಗತಿ ಕುರಿತಂತೆ ನಿಮ್ಮ ಸಮೀಕ್ಷೆ ಪೂರ್ಣಗೊಂಡಿದೆ ಅಥವಾ ಬಾಕಿ ಎಂದು ಕಾಣಬಹುದಾಗಿದ್ದು,

ಇದುವರೆಗೆ ಸಮೀಕ್ಷೆ ನಡೆಯದೇ ಬಾಕಿ ಇದ್ದಲ್ಲಿ, ಇನ್ನೂ ಯಾವುದೇ ಕುಟುಂಬ ಸದಸ್ಯರನ್ನು ಸೇರಿಸಿಲ್ಲ ಫಾರ್ಮ್ ಭರ್ತಿ ಮಾಡಲು ಆರಂಭಿಸಿ ಎಂಬ ಸಂದೇಶ ಕಾಣ ಲಿದ್ದು, ಹೊಸ ಸಮೀಕ್ಷೆ ಆರಂಭಿಸಿ ಎಂಬುದನ್ನು ಕ್ಲಿಕ್ ಮಾಡಬೇಕಾಗುತ್ತದೆ.

ನಂತರದ ಪುಟದಲ್ಲಿ ಈಗಾಗಲೇ ತಮ್ಮ ಮನೆಗೆ ಅಂಟಿಸಲಾಗಿರುವ ಸ್ಟಿಕ್ಕರ್ನಲ್ಲಿರುವ UHID ಸಂಖ್ಯೆ ಯನ್ನು ದಾಖಲಿಸಿ ಸ್ಕ್ರೀನ್ನಲ್ಲಿ ಕೋರುವ ಮಾಹಿತಿಗಳನ್ನು ದಾಖಲು ಮಾಡಬೇಕಾಗುತ್ತದೆ.ಸದರಿ ಸಮೀಕ್ಷೆಗೆ ದಾಖಲೆಗಳ ಮಾಹಿತಿ ನೀಡುವ ಅವಶ್ಯಕತೆ ಇರುವು ದರಿಂದ ತಮ್ಮ ಕುಟುಂಬದ ಸದಸ್ಯರ ರೇಷನ್ ಕಾರ್ಡ್,ಆಧಾರ್ ಕಾರ್ಡ್ ಮತದಾರರ ಗುರುತಿನ ಚೀಟಿ, ವಿಕಲಚೇತನರಾಗಿದ್ದರೆ UID Card ಅಥವಾ ಅಂಗ ವಿಕಲ ಪ್ರಮಾಣ ಪತ್ರದ ದಾಖಲೆಗಳನ್ನು ತೆಗೆದಿರಿ ಸಿಕೊಂಡು

ಸುಲಭವಾಗಿ ಈ ಸಮೀಕ್ಷೆ ಕಾರ್ಯದಲ್ಲಿ ತಾವೇ ಸ್ವಯಂ ಆಗಿ ಭಾಗವಹಿಸಬಹುದಾಗಿದ್ದು, ಸಮೀಕ್ಷೆ ಯಶಸ್ವಿ ಯಾದ ನಂತರ ಈ ಬಗ್ಗೆ ಮೊಬೈಲ್ಗೆ ಸಂದೇಶ ಬರಲಿದೆ. ಗಣತಿದಾರರು ತಮ್ಮ ಮನೆಗೆ ಬರುವವರೆಗೆ ಕಾಯದೇ ಸಾರ್ವಜನಿಕರು ತಮಗೆ ಅನುಕೂಲವಾದ ಅವಧಿಯಲ್ಲಿ ಯಾವುದೇ ಪ್ರದೇಶದಿಂದ ಸಮೀಕ್ಷೆಯಲ್ಲಿ ಭಾಗವಹಿಸ ಬಹುದಾಗಿದ್ದು

ತಾವೇ ತಮ್ಮ ಮಾಹಿತಿಯನ್ನು ದಾಖಲು ಮಾಡುವುದ ರಿಂದ, ಯಾವುದೇ ಗೊಂದಲಗಳಿಲ್ಲದೆ ನಿಖರವಾಗಿ ತಮ್ಮ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿಯನ್ನು ಸಮೀಕ್ಷೆಯಲ್ಲಿ ತಿಳಿಸಲು ಸಾಧ್ಯವಾಗಲಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು……

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.