ಹುಬ್ಬಳ್ಳಿ –
ಧಾರವಾಡ ಗದಗ ಹಾವೇರಿ ಮೂರು ಜಿಲ್ಲೆಗಳ ವ್ಯಾಪ್ತಿ ಯಲ್ಲಿನ ವಿಧಾನ ಪರಿಷತ್ ಚುನಾವಣೆಯ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿಂದು ಕಾಂಗ್ರೇಸ್ ಬಿಜೆಪಿ ಜೆಡಿಎಸ್ ಪಕ್ಷದ ಸ್ಥಳೀಯ ಸಂಸ್ಥೆಗಳ ನಾಯಕರು ಜನಪ್ರತಿನಿಧಿಗಳು ಹಕ್ಕು ಚಲಾವಣೆ ಮಾಡಿದರು. ನಗರದ ಮಹಾನಗರ ಪಾಲಿಕೆಯ ಮುಖ್ಯ ಕಚೇರಿಯಲ್ಲಿ ತೆರೆಯಲಾಗಿದ್ದ ಮತದಾನ ಕೇಂದ್ರಕ್ಕೆ ಆಗಮಿಸಿದ ನಾಯಕರು ಹಕ್ಕು ಚಲಾವಣೆ ಮಾಡಿದರು
ಬಸವರಾಜ ಹೊರಟ್ಟಿ ಹಕ್ಕು ಚಲಾವಣೆ
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಮ್ಮ ಹಕ್ಕು ಚಲಾವಣೆ ಮಾಡಿದರು.ಆಪ್ತರೊಂದಿಗೆ ಆಗಮಿಸಿದ ಇವರು ಆಯುಕ್ತರ ಕಚೇರಿಯ ಮೇಲೆ ತೆರೆಯಲಾಗಿದ್ದ ಕೇಂದ್ರದಲ್ಲಿ ಮತ ಚಲಾಯಿಸಿದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,ಜಗದೀಶ್ ಶೆಟ್ಟರ್ ರಿಂದಲೂ ಮತ ಚಲಾವಣೆ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡಾ ಮತ ಚಲಾವಣೆ ಮಾಡಿದರು.ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ಅಭ್ಯರ್ಥಿ ಪ್ರದೀಪ ಶೆಟ್ಟರ್, ಶಾಸಕ ಅರವಿಂದ ಬೆಲ್ಲದ ಸೇರಿದಂತೆ ಹಲವು ಬಿಜೆಪಿ ನಾಯಕರು ಪಾಲಿಕೆಯ ಸದಸ್ಯರೊಂದಿಗೆ ಮತದಾನ ಕೇಂದ್ರಕ್ಕೆ ಆಗಮಿಸಿ ಮತವನ್ನು ಚಲಾವಣೆ ಮಾಡಿದರು.
ಶಾಸಕರಿಂದಲೂ ಮತದಾನ
ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ತಮ್ಮ ವ್ಯಾಪ್ತಿಯಲ್ಲಿನ ಪಾಲಿಕೆಯ ಸದಸ್ಯರೊಂದಿಗೆ ಆಗಮಿಸಿ ಪಾಲಿಕೆಯ ಮತದಾನ ಕೇಂದ್ರದಲ್ಲಿ ತಮ್ಮ ಹಕ್ಕು ಚಲಾವಣೆ ಮಾಡಿದರು
ಇನ್ನೂ ಇತ್ತ ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಅರವಿಂದ ಬೆಲ್ಲದ ಅವರು ಕೂಡಾ ತಮ್ಮ ಆಪ್ತರೊಂದಿಗೆ ಆಗಮಿಸಿ ಓಟ್ ಮಾಡಿದರು.ಇನ್ನೂ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಪ್ರಸಾದ ಅಬ್ಬಯ್ಯ ಅವರು ಕೂಡಾ ಪಾಲಿಕೆ ಯ ಕೈ ಪಕ್ಷದ ಸದಸ್ಯರೊಂದಿಗೆ ಆಗಮಿಸಿ ತಮ್ಮ ತಮ್ಮ ಹಕ್ಕನ್ನು ಚಲಾವಣೆ ಮಾಡಿದರು.
ನವಲಗುಂದ ದಲ್ಲಿ ಸಚಿವ ಶಂಕರ ಪಾಟೀಲ ಮುನೇನ ಕೊಪ್ಪ ಅವರು ಆಪ್ತ ರೊಂದಿಗೆ ಮತ ಚಲಾವಣೆ ಮಾಡಿದರು