ಚಿಕ್ಕಮಗಳೂರು –
ಚಿಕ್ಕಮಗಳೂರು ಜಿಲ್ಲೆಯ ನವೋದಯ ವಸತಿ ಶಾಲೆ ಯಲ್ಲಿ ಈಗಾಗಲೇ ಕರೋನಾ ಸ್ಪೋಟವಾಗಿದ್ದು ಇದರ ಬೆನ್ನಲ್ಲೇ ಜಿಲ್ಲೆಯ ಮತ್ತೊಂದು ಶಾಲೆಯಲ್ಲಿ ಕರೋನಾ ಆತಂಕವನ್ನು ತಂದಿಟ್ಟಿದೆ.ಹೌದು 10 ಕ್ಕೂ ಹೆಚ್ಚು ವಿದ್ಯಾರ್ಥಿ ಗಳಿಗೆ ಕೊರೋನಾ ಮತ್ತೊಂದು ಖಾಸಗಿ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಸೇರಿ 11 ಜನರಲ್ಲಿ ಪಾಸಿಟಿವ್ ಕಾಣಿಸಿ ಕೊಂಡಿದೆ.
ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಜೀವನ್ ಜ್ಯೋತಿ ಖಾಸಗಿ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸೇರಿ 11 ಮಂದಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.ಖಾಸಗಿ ಶಾಲೆಯ 11 ವಿದ್ಯಾರ್ಥಿ ಗಳಿಗೆ ಕೊರೋನಾ ದೃಢಪಟ್ಟ ಕಾರಣ ಶಾಲೆಯನ್ನು ಒಂದು ವಾರಗಳ ಕಾಲ ಸೀಲ್ ಡೌನ್ ಮಾಡುವಂತೆ ಜಿಲ್ಲಾಧಿಕಾರಿ ಗಳು ಸೂಚನೆ ನೀಡಿದ್ದಾರೆ.
ಅಲ್ಲದೇ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಮನೆಯಲ್ಲೇ ಹೋಂ ಐಸೋಲೇಷನ್ ನಲ್ಲಿ ಇರಿಸಿ ಚಿಕಿತ್ಸೆ ನೀಡಲಾ ಗುತ್ತಿದೆ.