ಬೆಂಗಳೂರು –
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ರೆ ವಿದ್ಯಾಗಮ ಯೋಜನೆ ಜಾರಿಗೆ ತರಲು ಸಾರ್ವ ಜನಿಕ ಶಿಕ್ಷಣ ಇಲಾಖೆ ತೀರ್ಮಾನಿಸಿದ್ದು ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಭೌತಿಕ ತರಗತಿಗಳು ಬಂದ್ ಆಗಿದೆ.ಈ ಹಿನ್ನೆಲೆ ಸಾರ್ವಜನಿಕ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ.
ಹೌದು ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿನ ಬೆಂಗಳೂರು,ಉತ್ತರ ಮತ್ತು ದಕ್ಷಿಣ ಶೈಕ್ಷಣಿಕ ಜಿಲ್ಲೆಗಳ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿನ ಪೂರ್ವ ಪ್ರಾಥಮಿಕ,ಎಲ್ ಕೆ ಜಿ ಹಾಗೂ ಯುಕೆಜಿ ಹಾಗೂ 1 ರಿಂದ 9 ನೇ ತರಗತಿವರೆಗೆ ಜನೆವರಿ 19 ರವರೆಗೆ ಭೌತಿಕ ತರಗತಿ ಸ್ಥಗಿತಗೊಳಿಸಲು ತಿಳಿಸಲಾ ಗಿದೆ ಆದರೆ ಈ ಅವಧಿಯಲ್ಲಿ ಶನಿವಾರದಂದು ಯಾವುದೇ ಕಾರಣಕ್ಕೂ ಶಾಲೆಗಳನ್ನು ನಡೆಸದಿರಲು ತಿಳಿಸಿದೆ.
ಈಗಾಗಲೇ ಬೆಂಗಳೂರು ನಗರದಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಎಲ್ಲಾ ಜಿಲ್ಲೆಗಳಲ್ಲಿಯೂ ಕೊರೊನಾ ಸೋಂಕು ಹೆಚ್ಚಾಗಿ ರಜೆ ಘೋಷಿಸಿದರೆ ವಿದ್ಯಾಗಮ ಯೋಜನೆಯನ್ನು ಅನುಷ್ಟಾನಗೊಳಿಸಲು ಸೂಚನೆ ನೀಡಿದೆ.ಈ ಸಂಬಂಧ ಶಿಕ್ಷಣ ಇಲಾಖೆ ಕ್ರಮಕೈಗೊಂಡಿದ್ದು, ಎಲ್ಲಾ ಬಿಇಒ ಮತ್ತು ಉಪನಿರ್ದೇಶಕರಿಗೆ ಸುತ್ತೋಲೆ ಹೊರಡಿಸಲಾಗಿದೆ.
ವಿದ್ಯಾಗಮ ಮಾದರಿಯಲ್ಲಿ ಬೋಧನೆ ಮಾಡುವಂತೆ ಸುತ್ತೋಲೆ ಹೊರಡಿಸಲಾಗಿದೆ ಹೌದು.ರಾಜ್ಯದಲ್ಲಿ ಶಾಲೆ ಗಳಿಗೆ ರಜೆ ನೀಡಿದರೆ ವಿದ್ಯಾಗಮ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ.ಯೋಜನೆಯ ಜಾರಿಗೆ ರೂಪು ರೇಷೆ ಸಿದ್ದಪಡಿಸಲಾಗುತ್ತಿದೆ.ಈಗಾಗಲೇ ಬೆಂಗಳೂರು ನಗರದಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಎಲ್ಲಾ ಜಿಲ್ಲೆಗಳಲ್ಲಿಯೂ ಕೊರೊನಾ ಸೋಂಕು ಹೆಚ್ಚಾಗಿ ರಜೆ ಘೋಷಿಸಿದರೆ ವಿದ್ಯಾಗಮ ಯೋಜನೆಯನ್ನು ಅನುಷ್ಠಾ ನಗೊಳಿಸಲಿದೆ.ಈ ಸಂಬಂಧ ಶಿಕ್ಷಣ ಇಲಾಖೆ ಕ್ರಮಕೈ ಗೊಂಡಿದ್ದು ಎಲ್ಲಾ ಬಿಇಒ ಮತ್ತು ಉಪನಿರ್ದೇಶಕರಿಗೆ ಸುತ್ತೋಲೆ ಹೊರಡಿಸಲಾಗಿದೆ.ವಿದ್ಯಾಗಮ ಮಾದರಿಯಲ್ಲಿ ಬೋಧನೆ ಮಾಡುವಂತೆ ಸುತ್ತೋಲೆ ಹೊರಡಿಸಲಾಗಿದೆ.