ಬೆಂಗಳೂರು –
ಕರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಶಾಲೆಗಳನ್ನು ಮುಚ್ಚುವಂತೆ ಸೂಚಿಸಿರುವ ಸರ್ಕಾರ ಇದೀಗ ಕೋಚಿಂಗ್ ಸೆಂಟರ್ ಗಳನ್ನು ಮುಚ್ಚಿಸಲು ನಿರ್ಧರಿಸಿದೆ.ಬೆಂಗಳೂರು ನಗರ ವ್ಯಾಪ್ತಿಯಲ್ಲಿರುವ ಎಲ್ಲ ರೀತಿಯ ತರಬೇತಿ ಕೇಂದ್ರಗಳನ್ನು ಮುಚ್ಚಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ.
ಶಾಲೆಗಳನ್ನು ಮುಚ್ಚಿದರೆ,ಟ್ಯೂಷನ್ ಹಾಗೂ ತರಬೇತಿ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹೋಗುತ್ತಾರೆ.ಇಲ್ಲಿ ವಿದ್ಯಾರ್ಥಿಗಳನ್ನು ನಿಯಂತ್ರಿಸುವುದು ಯಾರು? ಎಂದು ಖಾಸಗಿ ಶಾಲೆಗಳು ಶಿಕ್ಷಣ ಇಲಾಖೆಯನ್ನು ಪ್ರಶ್ನಿಸಿದ್ದವು.
ಈ ಹಿನ್ನೆಲೆಯಲ್ಲಿ ಶಾಲೆಗಳ ಜತೆಗೆ ಜ.19ರವರೆಗೆ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಗೆ ಬರುವ 10ನೇ ತರಗತಿವರೆಗೆ ಎಲ್ಲ ರೀತಿಯ ಟ್ಯೂಷನ್ ಹಾಗೂ ತರಬೇತಿ ಕೇಂದ್ರಗಳನ್ನು ಮುಚ್ಚಿಸುವಂತೆ ಜಿಲ್ಲಾ ಉಪನಿರ್ದೇಶಕರಿಗೆ ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.ಅಲ್ಲದೆ ವಾರಾಂತ್ಯ ಕರ್ಪ್ಯೂ ಜಾರಿಯಲ್ಲಿರುವುದರಿಂದ ಈ ಅವಧಿ ಯಲ್ಲಿನ ರಾಜ್ಯಾದ್ಯಂತ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳನ್ನು ನಡೆಸದಂತೆ ಸೂಕ್ತ ಕ್ರಮವಹಿ ಸಲು ಸೂಚನೆ ನೀಡಿದೆ.ರಾಜ್ಯದಲ್ಲಿರುವ ಟ್ಯೂಷನ್ ಕೇಂದ್ರಗಳು ಯಾವ ಇಲಾಖೆಯ ವ್ಯಾಪ್ತಿಗೂ ಬಾರದೇ ಇರುವುದರಿಂದ ಇವುಗಳ ನಿಯಂತ್ರಣ ಮಾಡುವುದು ಶಿಕ್ಷಣ ಇಲಾಖೆಗೆ ಕಷ್ಟವಾಗಿತ್ತು. ಖಾಸಗಿ ಶಾಲಾ ಆಡಳಿತ ಮಂಡಳಿಗಳು ಈ ವಿಚಾರವಾಗಿ ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದ ಹಿನ್ನೆಲೆ ಯಲ್ಲಿ ಇದೀಗ ಶಿಕ್ಷಣ ಇಲಾಖೆಯು ಟ್ಯೂಷನ್ ಕೇಂದ್ರಗ ಳನ್ನು ಸಹ ಮುಚ್ಚಿಸಬೇಕೆಂದು ಆದೇಶಿಸಿದೆ.