ಬೆಂಗಳೂರು –
ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸಿ ಪರ್ಯಾಯ ಬೋಧನಾ ವಿಧಾನದ ತರಗತಿ ನಡೆಸುವ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಜಿಲ್ಲಾಧಿಕಾರಿ, ತಹಶೀಲ್ದಾರರು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದರು.ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿ ದ್ದರೂ,ಆಸ್ಪತ್ರೆಗೆ ದಾಖಲಾಗುವ ಪ್ರಮಾಣ ಕಡಿಮೆ ಇದೆ. ಒಂದನೇ ಮತ್ತು 2ನೇ ಅಲೆಯಂತೆ ಆತಂಕ ಪಡುವ ಅಗತ್ಯವಿಲ್ಲ ಎಂದರು.
ಕೊರೊನಾ ಪಾಸಿಟಿವಿಟಿ ಪ್ರಮಾಣ ಆಧರಿಸಿ ತಾಲೂಕು, ಸ್ಥಳೀಯ ಮಟ್ಟದಲ್ಲಿ ಶಾಲೆ,ಪಿಯುಸಿ ತರಗತಿಗಳ ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸಿ ಆನ್ ಲೈನ್ ಕ್ಲಾಸ್ ನಡೆಸು ವ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಜಿಲ್ಲಾಧಿಕಾರಿ,ತಹಶಿಲ್ದಾರರ ನಿರ್ಧಾರ ತೆಗೆದುಕೊಳ್ಳಬೇಕು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಭೌತಿಕ ತರಗತಿಗಳನ್ನು ಸ್ಥಗಿತ ಗೊಳಿಸುವ ಅಗತ್ಯತೆ ಕಂಡು ಬಂದಿಲ್ಲ.ಈ ಕುರಿತು ತಜ್ಞರ ಜೊತೆ ವಿವರವಾಗಿ ಚರ್ಚಿಸಲಾಗಿದೆ ಎಂದು ಸಚಿವ ಬಿ.ಸಿ ನಾಗೇಶ್ ತಿಳಿಸಿದರು.