ಚಾಮರಾಜನಗರ –
ಕೊರೊನಾ ವಕ್ಕರಿಸಿದ ಏಳು ದಿನದಲ್ಲೇ ಚಾಮರಾಜ ನಗರದಲ್ಲಿ ವೈದ್ಯರೊಬ್ಬರು ಸಾವನ್ನಪ್ಪಿದ್ದು ಜನರಲ್ಲಿ ಆತಂಕ ಮೂಡಿದೆ.ಕೊರೊನಾ ದಿನೇ ದಿನೆ ದ್ವಿಗುಣಗೊಳ್ಳುತ್ತಿರುವ ಹೊತ್ತಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರೊ ಬ್ಬರು ಮೃತಪಟ್ಟಿರುವ ಘಟನೆ ನಗರದ ಖಾಸಗಿ ಆಸ್ಪತ್ರೆ ಯಲ್ಲಿ ನಡೆದಿದೆ.
ಚಾಮರಾಜನಗರ ತಾಲೂಕಿನ ಆಲೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ಅಭಯ್ ಕುಮಾರ್ ಸಾವನ್ನಪ್ಪಿದ್ದಾರೆ.ಮೃತ ವೈದ್ಯರಿಗೆ 7 ದಿನದ ಹಿಂದೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಹೀಗಾಗಿ ಅವರು ಬೆಂಗಳೂರು,ಚಾಮರಾಜನಗರ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಚಿಕಿತ್ಸೆ ಫಲಕಾರಿಯಾಗದೇ ಅಭಯ್ ಕುಮಾರ್ ಸಾವನ್ನ ಪ್ಪಿದ್ದು, ಮೆದುಳಿಗೆ ಸಂಬಂಧಿಸಿದ ಕಾಯಿಲೆ ಹೊಂದಿದ್ದರು ಎಂದು ತಿಳಿದು ಬಂದಿದೆ.ವೈದ್ಯರ ಸಾವಿಗೆ ಕುಟುಂಬಸ್ಥರು ಸೇರಿದಂತೆ ಸಹೋದ್ಯೋಗಿಗಳು ಕಂಬನಿ ಮಿಡಿದಿದ್ದಾರೆ.