ವಿಜಯಪುರ –
ಶಾಲೆಯ ಮೇಲ್ಫಾವಣಿಯೊಂದು ಕುಸಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿ ರುವ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನಂದಿಹಾಳ ಪಿಯು ಗ್ರಾಮದಲ್ಲಿ ನಡೆದಿದೆ.ಘಟನೆ ಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದು ಇನ್ನುಳಿದ ವಿದ್ಯಾರ್ಥಿಗಳು ಪಾರಾಗಿದ್ದಾರೆ.ಹೀಗಾಗಿ ಭಾರೀ ದುರಂತ ವೊಂದು ತಪ್ಪಿದಂತಾಗಿದೆ.
ಗಾಯಗೊಂಡ ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಇನ್ನೂ ಈ ಕುರಿತು ಪಾಲಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಈ ಶಾಲೆಯಲ್ಲಿನ ಕಟ್ಟಡ ತೀರಾ ಹಳೆಯದಾಗಿದ್ದು ವಿದ್ಯಾರ್ಥಿಗಳ ಪ್ರಾಣಕ್ಕೆ ಅಪಾಯ ತಂದೊಡ್ಡಬಹುದು ಎಂದು ಗ್ರಾಮಸ್ಥರು ಶಾಲೆಯ ಶಿಕ್ಷಕರು ಹಾಗೂ ಆಡಳಿತ ಮಂಡಳಿಗೆ ಈ ಹಿಂದೆಯೇ ಮನವಿ ಮಾಡಲಾಗಿತ್ತು.ಆದರೆ ಸಂಬಂಧಪಟ್ಟವರು ಮಾತ್ರ ಈ ಕುರಿತು ನಿರ್ಲಕ್ಷ್ಯ ವಹಿಸಿದ್ದರು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.