ಬೆಂಗಳೂರು –
ಶಾಲಾ ಮಕ್ಕಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೊರೊನಾ ಸೋಂಕು ಉಲ್ಬಣಿಸಿದರೆ ಆ ಶಾಲೆಗಳನ್ನು ಬಂದ್ ಮಾಡಲಾಗುವುದು.ಬೆಂಗಳೂರು ಮಹಾನಗರ ವ್ಯಾಪ್ತಿಯ ಎಲ್ಲ ಶಾಲೆ-ಕಾಲೇಜುಗಳು ಜನವರಿ 29ರವರೆಗೆ ಬಂದ್ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ಒಂದು ಮಾಹಿತಿಯನ್ನು ನೀಡಿದರು

ಬೆಂಗಳೂರು ನಗರ ಹೊರತುಪಡಿಸಿ ಉಳಿದೆಡೆ ಶಾಲೆಗಳು ಎಂದಿನಂತೆ ನಡೆಯುತ್ತವೆ.ಒಂದು ಶಾಲೆಯಲ್ಲಿ 20ಕ್ಕೂ ಹೆಚ್ಚು ಮಕ್ಕಳಿಗೆ ಕೊರೊನಾ ಸೋಂಕು ಕಂಡುಬಂದಲ್ಲಿ ಆ ಶಾಲೆಗಳನ್ನು ಬಂದ್ ಮಾಡಲಾಗುವುದು.ಇದರ ಎಲ್ಲ ಜವಾಬ್ದಾರಿಗಳನ್ನು ನೋಡಲ್ ಅಧಿಕಾರಿ ಹಾಗೂ ತಹಶೀಲ್ದಾರ್ ಗಳಿಗೆ ವಹಿಸಲಾಗಿದೆ ಎಂದು ನಾಗೇಶ್ ಹೇಳಿದ್ದಾರೆ.