ಕಾರ್ಗಲ್ –
ಅಡುಗೆ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡು ಬಿಸಿಯೂಟ ಕಾರ್ಯಕರ್ತೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾರ್ಗಲ್ ನ ಅರಳಗೋಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಶಾಲೆ ಯಲ್ಲಿ ಅಡುಗೆ ಮಾಡುತ್ತಿದ್ದಾಗ ಅನಿಲ ಪೂರೈಕೆಯ ರಬ್ಬರ್ ಪೈಪ್ ಸೋರಿಕೆಯಲ್ಲಿ ಉಂಟಾದ ಅಗ್ನಿ ಆಕಸ್ಮಿಕ ದಿಂದಾಗಿ ಈ ಒಂದು ಅವಘಡ ಸಂಭವಿಸಿದ್ದುಬಿಸಿಯೂಟ ಕಾರ್ಯಕರ್ತೆ ಗಾಯಗೊಂಡಿದ್ದಾರೆ.ಬಿಸಿಯೂಟ ಕಾರ್ಯ ಕರ್ತೆ ನಾಗರತ್ನ ಅಡುಗೆ ಮಾಡುತ್ತಿದ್ದಾಗ ಅನಿಲ ಸೋರಿಕೆ ಯಿಂದ ಬೆಂಕಿ ಹೊತ್ತಿಕೊಂಡಿತ್ತು.ಕೂಡಲೇ ಸ್ಥಳೀಯರು ಬೆಂಕಿ ನಂದಿಸಿದರು.
ಇನ್ನೂ ಘಟನೆಯಲ್ಲಿ ಗಾಯಗೊಂಡ ನಾಗರತ್ನ ಅವರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡ ಲಾಗಿದೆ.ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಆರ್. ಮೇಘ ರಾಜ್,ಉಪಾಧ್ಯಕ್ಷೆ ಲಕ್ಷ್ಮೀ ಕೃಷ್ಣಮೂರ್ತಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮಂಜುಳಾ ಇಂಡೇನ್ ಗ್ಯಾಸ್ ಏಜೆನ್ಸಿ ವ್ಯವಸ್ಥಾಪಕ ಮೋಹನ್ ಎಂ. ಪೈ ಆರೋಗ್ಯ ವಿಚಾರಿಸಿ ವೈಯುಕ್ತಿಕ ಧನಸಹಾಯ ನೀಡಿದರು.ಕಾರ್ಗಲ್ ಪೊಲೀಸ್ ಠಾಣಾ ಸಿಬ್ಬಂದಿ ಮತ್ತು ಪಂಚಾಯಿತಿ ಅಧಿಕಾರಿ ಸುರೇಶ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳಿಗೆ ಸೂಚಿಸಿದರು ಇದರೊಂದಿಗೆ ಸರ್ಕಾರಿ ಶಾಲೆಯಲ್ಲಿ ದೊಡ್ಡ ಅವಘಡವೊಂದು ತಪ್ಪಿದಂತಾಗಿದ್ದು ಇದರಿಂದಾಗಿ ಶಾಲೆಯ ಶಿಕ್ಷಕರು ಸೇರಿದಂತೆ ಹಲವರು ನೆಮ್ಮದಿಯ ನಿಟ್ಟಿಸಿರು ಬಿಟ್ಟಿದ್ದಾರೆ