ಬೆಂಗಳೂರು –
ಕೊರೋನಾ ವೈರಸ್ ಸೋಂಕಿಗೆ ಒಳಗಾದರೆ ರಾಜ್ಯ ಸರ್ಕಾರಿ ನೌಕರರಿಗೆ ಮನೆಯಲ್ಲಿ ಪ್ರತ್ಯೇಕವಾಗಿರಲು ಅಥವಾ ಚಿಕಿತ್ಸೆ ಪಡೆಯಲು ವಿಶೇಷ ಸಾಂದರ್ಭಿಕ ರಜೆ ಪಡೆಯಲು ಅವಕಾಶವನ್ನು ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹೌದು ಸಧ್ಯ ರಾಜ್ಯದಲ್ಲಿ ಕೊರೊನಾ ಸೋಂಕಿನ ತೀವ್ರತೆ ಯು ಇಳಿಮುಖವಾಗಿದ್ದು ಇದರ ನಡುವೆ ಒಂದು ವೇಳೆ ರಾಜ್ಯ ಸರ್ಕಾರಿ ನೌಕರರು ಕೋವಿಡ್ ತಗುಲಿದರೆ ಅವರಿಗೆ ಸಂದರ್ಭನುಸಾರ ವಿಶೇಷ ಸಾಂದರ್ಭಿಕ ರಜೆಯನ್ನು ಸಂಬಂಧ ಪಟ್ಟ ಸಕ್ಷಮ ಪ್ರಾಧಿಕಾರವು ರಜೆ ಮಂಜೂರು ಮಾಡಬಹುದಾಗಿದೆ ಎಂದು ರಾಜ್ಯ ಸರ್ಕಾರ ಆದೇಶವನ್ನು ಮಾಡಿದೆ

ಇನ್ನು ಸರ್ಕಾರಿ ನೌಕರ ಅಥವಾ ಆತನ ಕುಟುಂಬದ ಸದಸ್ಯರಿಗೆ ಕೋವಿಡ್ ಸೋಂಕಿಗೆ ಒಳಗಾದರೆ ಅಥವಾ ಸರ್ಕಾರಿ ನೌಕರನು ವಾಸಿಸುವ ಪ್ರದೇಶದಲ್ಲಿ ಕಂಟೇನ್ಮೆಂಟ್ ಪ್ರದೇಶವೆಂದು ಘೋಷಿಸಿದರೆ ಅಂತ ಪ್ರದೇಶದಲ್ಲಿ ಸಾರ್ವಜನಿಕ ಸಂಚಾರಕ್ಕೆ ನಿರ್ಬಂಧ ಹೇರಿದ್ದಾರೆ ಅಂತಹ ಸರ್ಕಾರಿ ನೌಕರರಿಗೆ ಗರಿಷ್ಠ 7 ದಿನಗಳ ವಿಶೇಷ ಸಾಂದ ರ್ಭಿಕ ರಜೆಯನ್ನು ಮಂಜೂರು ಮಾಡಬಹುದು ಎಂದು ಉಲ್ಲೇಖ ಮಾಡಿ ಆದೇಶವನ್ನು ಮಾಡಲಾಗಿದ್ದು ಇದರಿಂದ ನೌಕರರಿಗೆ ಸಾಕಷ್ಟು ಪ್ರಮಾಣದಲ್ಲಿ ಅನುಕೂಲ ಆಗಲಿದೆ