ಬೆಂಗಳೂರು –
ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂದು ರಾಜ್ಯಾಧ್ಯಕ್ಷ ಷಡಕ್ಷಾರಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ಹೊಸ ಪಿಂಚಣಿ ಯೋಜನೆಯನ್ನು ಹಿಂಪಡೆದು ಹಳೆಯ ನಿಯಮದಂತೆ ಪಿಂಚಣಿ ಸೌಲಭ್ಯ ಕಲ್ಪಿಸಬೇಕು ಎಂಬ ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಗೆ ಸಿಎಂ ಬಸವರಾಜ ಬೊಮ್ಮಾಯಿ ತಾತ್ವಿಕ ಒಪ್ಪಿಗೆ ನೀಡಿದ್ದಾರೆ.ಈ ಕುರಿತು ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಮಾಹಿತಿ ನೀಡಿದ್ದು ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಜಾರಿಗೊ ಳಿಸಿರುವ ಹೊಸ ಪಿಂಚಣಿ ಯೋಜನೆಯನ್ನು ಹಿಂಪಡೆದು ಹಳೆಯ ನಿಯಮದಂತೆ ಪಿಂಚಣಿ ಸೌಲಭ್ಯ ಕಲ್ಪಿಸಬೇಕು ಎಂಬ ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಗೆ ಸಿಎಂ ಬೊಮ್ಮಾಯಿ ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದ್ದಾರೆ.
ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಲು ಮುಖ್ಯಮಂ ತ್ರಿ ಬಸವರಾಜ ಬೊಮ್ಮಾಯಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಹಲವರು ಪತ್ರ ಬರೆದು ಒತ್ತಾಯವನ್ನು ಮಾಡಿ ಹಳೆ ಪಿಂಚಣಿ ಯೋಜನೆಯನ್ನೇ ಜಾರಿಗೊಳಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿ ಆಗ್ರಹ ಮಾಡಿದ್ದರು ಈ ಕುರಿತು ರಾಜ್ಯದ ಸರ್ಕಾರಿ ನೌಕರರ ಸಂಘಟನೆ ಕೂಡಾ ಬೇಡಿಕೆ ಇಟ್ಟಿತ್ತು
ಇನ್ನೂ ಇವೆಲ್ಲದರ ನಡುವೆ ರಾಜಸ್ಥಾನ ಸರ್ಕಾರ ಸೇರಿದಂತೆ ಹಲವು ರಾಜ್ಯಗಳಲ್ಲಿ ಹೊಸ ಮಾದರಿಯ ಪಿಂಚಣಿ ಯೋಜನೆ ರದ್ದುಗೊಳಿಸಿದೆ ಹಳೆ ಪಿಂಚಣಿ ಯೋಜನೆ ಜಾರಿಗೆ ತರಲಾಗಿದೆ.ಹೀಗಾಗಿ ನಮ್ಮ ರಾಜ್ಯದಲ್ಲೂ ಕೂಡಾ ಈ ಒಂದು ಯೋಜನೆ ಜಾರಿಗೆ ಒತ್ತಾಯವನ್ನು ಮಾಡಲಾ ಗಿತ್ತು ಇದರಿಂದಾಗಿ ಮಾರ್ಚ್ 4ರಂದು ಮಂಡಿಸುವ 2022-23ನೇ ಸಾಲಿನ ಕರ್ನಾಟಕ ರಾಜ್ಯದ ಆಯವ್ಯಯ ದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜ ನೆಯನ್ನು ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ ಯನ್ನು ಜಾರಿಗೊಳಿಸುವ ಮಹತ್ವದ ನಿರ್ಧಾರವನ್ನು ಪ್ರಕಟಿಸಬೇಕು ಎಂದು ಕೋರಿದ್ದಾರೆ.
ಏಪ್ರಿಲ್ 1, 2006ರ ನಂತರದ ನೌಕರರಿಗೆ ಹೊಸ ಪಿಂಚಣಿ ಯೋಜನೆ ಜಾರಿಗೊಳಿಸಲಾಗಿದೆ.ಇದರಿಂದ ಲಕ್ಷಾಂತರ ನೌಕರರಿಗೆ ನಿವೃತ್ತಿ ನಂತರ ಅಗತ್ಯ ಸೌಲಭ್ಯಗಳು ಸಿಗುವು ದಿಲ್ಲ.ಆರ್ಥಿಕ ಸೌಲಭ್ಯ ದೊರೆಯದೆ ಜೀವನ ಕಷ್ಟಸಾಧ್ಯವಾ ಗಿದೆ ಆದ್ದರಿಂದ ಹಳೆ ಪಿಂಚಣಿ ಯೋಜನೆಯನ್ನೇ ಜಾರಿಗೊ ಳಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದು ಇದರಿಂದ ಮುಖ್ಯಮಂತ್ರಿ ಇದಕ್ಕೆ ತಾತ್ವಿಕ ಒಪ್ಪಿಗೆ ನೀಡಿದ್ದು ಸಂತೋಷ ದ ಸಂಗತಿಯಾಗಿದೆ