ಬೆಂಗಳೂರು –
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ನೌಕರರ ಸಂಘ ಬೃಹತ್ ಪ್ರತಿಭಟ ನೆಗೆ ಸಜ್ಜಾಗಿದ್ದಾರೆ.ಹೌದು ಈವರೆಗೆ ಕಾದು ಕಾದು ಬೇಸತ್ತು ಈಗ ಮಾರ್ಚ್ 4 ರಂದು ರಾಜ್ಯಾದ್ಯಂತ ಶಾಲಾ ಕಾಲೇಜು ಗಳನ್ನ ಬಂದ್ ಮಾಡಿ ಮೆಜೆಸ್ಟಿಕ್ ನಿಂದ ವಿಧಾನಸೌಧದ ತನಕ ಬೃಹತ್ ರ್ಯಾಲಿ ನಡೆಸಲು ತೀರ್ಮಾನ ವನ್ನು ಕೈಗೊಂಡಿದ್ದು ಅರ್ನಿದಿಷ್ಟ ಅಹೋರಾತ್ರಿ ಧರಣಿಗೂ ಸಿದ್ದವಾಗಿರುವುದಾಗಿ ರಾಜ್ಯಾಧ್ಯಕ್ಷ ಗೋಪಿನಾಥ್ ಹೇಳಿದ್ದಾರೆ
ಹೌದು ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು ಕಳೆದ 2014 ರಿಂದಲೂ ಅನೇಕ ಮನವಿಯನ್ನು ಸಲ್ಲಿಸಿ ಹೋರಾಟಗಳನ್ನು ನಡೆಸಿದರು ಕೂಡಾ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೌಕರರ ಪ್ರಮುಖ ಬೇಡಿಕೆಗಳಾದ 2006ಕ್ಕೂ ಮೊದಲು ನೇಮಕವಾಗಿ ನಂತರ ಅನುದಾನಕ್ಕೊಳಪಟ್ಟ ಹಾಲಿ ಕಾರ್ಯ ನಿರ್ವಹಿಸುತ್ತಿರುವ ಹಾಗೂ ನಿವೃತ್ತರಾಗಿರುವ ನೌಕರರ ಸೇವಾ ಅವಧಿಯನ್ನ ಕಾಲ್ಪನಿಕವಾಗಿ ಪರಿಗಣಿಸಿ, ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯ ನೀಡುವುದು.2006ರ ನಂತರ ನೇಮಕವಾದ ನೌಕರರಿಗೆ ನೂತನ ಪಿಂಚಣಿ ಯೋಜನೆಯನ್ನ ಸರ್ಕಾರಿ ನೌಕರರಿಗೆ ನೀಡಬೇಕು ಹಾಗೂ ನೌಕರರ ಪಾಲಿನ ಶೇ.14 ರಷ್ಟು ಹಣವನ್ನು ಆಡಳಿತ ಮಂಡಳಿಗೆ ನೀಡಬೇಕು.ಅನುದಾನಿತ ಶಾಲಾ- ಕಾಲೇಜು ಗಳ ನೌಕರರಿಗೂ ಆರೋಗ್ಯ ಸಿರಿ( ಜ್ಯೋತಿ ಸಂಜೀವಿನಿ) ಯೋಜನೆಯನ್ನ ಜಾರಿಗೆ ತರಬೇಕು.ಖಾಲಿ ಹುದ್ದೆಗಳನ್ನು ತುಂಬಿಕೊಳ್ಳಲು ವಿಧಿಸಿರುವ ನಿಯಮಗಳನ್ನ ಸಡಿಲಗೊ ಳಿಸಬೇಕು.ಸರ್ಕಾರಿ ಶಾಲಾ ಮಕ್ಕಳಿಗೆ ನೀಡುತ್ತಿರುವ ಸೌಲಭ್ಯಗಳನ್ನ ಅನುದಾನಿತ ಶಾಲಾ ಮಕ್ಕಳಿಗೂ ನೀಡಬೇಕೆಂದು ಮನವಿ ಮಾಡಿದ್ದಾರೆ.
ಪರಶುರಾಮ ಗೌಡರ ಜೊತೆ ಮಂಜುನಾಥ ಸರ್ವಿ ಸುದ್ದಿ ಸಂತೆ ನ್ಯೂಸ್ ಧಾರವಾಡ.