ಬೆಂಗಳೂರು –
ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಮತ್ತೊಮ್ಮೆ ಕಂಟಕ ಎದುರಾಗಿದೆ.ಹೀಗಾಗಿ ಕೌನ್ಸೆಲಿಂಗ್ ಅನ್ನು ಶಿಕ್ಷಣ ಇಲಾಖೆ ಸ್ಥಗಿತಗೊಳಿಸಿದೆ.ಪ್ರಾಥಮಿಕ ಶಾಲಾ ಸಹಶಿಕ್ಷಕರ ವರ್ಗಾ ವಣೆ ಪ್ರಕ್ರಿಯೆಯನ್ನು ಎರಡು ಹಂತದಲ್ಲಿ ನಡೆಸಲಾಗಿದೆ. ಮೊದಲ ಹಂತದಲ್ಲಿ ಈಗಾಗಲೇ ಸುಮಾರು 8 ಸಾವಿರ ಶಿಕ್ಷಕರಿಗೆ ವರ್ಗಾವಣೆ ದೊರೆತಿದೆ.ಆದರೆ ಎರಡನೇ ಹಂತದ ಅಂತರ ಘಟಕ ವಿಭಾಗದ ಹೊರಗಿನ ವಿಭಾಗದಿಂದ ಹೊರಗೆ ವರ್ಗಾವಣೆಗೆ ತಡೆಯಾಜ್ಞೆ ನೀಡಿರುವುದರಿಂದ ಅರ್ಜಿ ಸಲ್ಲಿಸಿದ್ದ 645 ಶಿಕ್ಷಕರು ವರ್ಗಾವಣೆಯಿಂದ ವಂಚಿತರಾಗುವ ಆತಂಕದಲ್ಲಿದ್ದಾರೆ.

ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕ (ಜಿಪಿಟಿ) ಹುದ್ದೆಗಳಿಗೆ ಪ್ರಾಥಮಿಕ ಶಾಲಾ ಸಹ ಶಿಕ್ಷಕರನ್ನು (ಪಿಎಸ್‌ಟಿ) ಕೌನ್ಸೆಲಿಂ ಗ್‌ನಲ್ಲಿ ಸ್ಥಳ ಆಯ್ಕೆ ಮಾಡಿಕೊಳ್ಳಲು ಅವಕಾಶ ಮಾಡಿಕೊ ಟ್ಟಿರುವುದನ್ನು ಪ್ರಶ್ನಿಸಿ ಶ್ರೀಶೈಲ(ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು)ಎಂಬವರು ಕೆಎಟಿ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೆಎಟಿ ಮಧ್ಯಂತರ ಆದೇಶ ನೀಡಿದ್ದು ಅಂತಿಮ ತೀರ್ಪು ಬರುವವರೆಗೂ ಪ್ರಾಥಮಿಕ ಶಾಲಾ ಸಹಶಿಕ್ಷಕರ ವರ್ಗಾವಣೆಗೆ ಕೌನ್ಸೆಲಿಂಗ್ ನಡೆಸದಂತೆ ಆದೇಶಿಸಿದೆ. ವರ್ಗಾವಣೆ ಪ್ರಕ್ರಿಯೆಯನ್ನೇ ರದ್ದುಪಡಿಸ ಬೇಕೆಂದು ಶ್ರೀಶೈಲ ಅವರು ಮನವಿ ಮಾಡಿದ್ದಾರೆ.

ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದ 2020 ನ. 11ರ ಪ್ರಕಾರ ಮೊದಲ ಹಂತದ ವರ್ಗಾವಣೆ ಪೂರ್ಣಗೊಂಡಿದೆ. 2021 ಜೂನ್ 30ರ ಅಧಿಸೂಚನೆಯಂತೆ ಎರಡನೇ ಹಂತದ ವರ್ಗಾವಣೆ ನಡೆಯಬೇಕಿತ್ತು.ಈಗಾಗಲೇ ಘಟಕ ದ ಒಳಗೆ ಮತ್ತು ವಿಭಾಗದ ಪ್ರಾಥಮಿಕ ಸಹ ಶಿಕ್ಷಕರ ವರ್ಗಾವಣೆ ಪೂರ್ಣಗೊಂಡಿದೆ.ಅಲ್ಲದೆ, ಈಗಾಗಲೇ ಪ್ರಾಥ ಮಿಕ ಶಾಲಾ ಶಿಕ್ಷಕರ ವರ್ಗಾವಣೆಯು ಶೇ 90 ಮುಕ್ತಾಯ ವಾಗಿದ್ದು ಇಡೀ ಪ್ರಕ್ರಿಯೆ ಕೊನೆ ಹಂತದಲ್ಲಿದೆ.ಈ ತಡೆಯಾ ಜ್ಞೆಯನ್ನು ಆದಷ್ಟು ಬೇಗ ತೆರವುಗೊಳಿಸಿ ಕೌನ್ಸೆಲಿಂಗ್ ನಡೆಸಿ ಉಳಿದ ಶಿಕ್ಷಕರಿಗೆ ಸ್ಥಳ ಆಯ್ಕೆಗೆ ಅವಕಾಶ ಮಾಡಿ ಕೊಡಬೇಕು ಎಂದು ಪ್ರಾಥಮಿಕ ಶಾಲಾ ಸಹ ಶಿಕ್ಷಕರು ಆಗ್ರಹಿಸಿದ್ದಾರೆ.ಅಂತರ್ ಘಟಕ ವಿಭಾಗದ ಹೊರಗಿನ ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಕೌನ್ಸೆಲಿಂಗ್ ಪ್ರಕ್ರಿಯೆಯ ನ್ನು ಇದೇ 28ರಂದು ವರ್ಚುವಲ್ ಮೂಲಕ ಆಯಾ ಜಿಲ್ಲಾ ಉಪನಿರ್ದೇಶಕರ ಕಚೇರಿಗಳಲ್ಲಿ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿತ್ತು.ವರ್ಗಾವಣೆ ಪ್ರಕ್ರಿಯೆಯನ್ನು ಪೂರ್ಣಗೊಳಿ ಸಲು ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ್ದರೂ ಎರಡು ವರ್ಷಗಳಿಂದ ಈ ಪ್ರಕ್ರಿಯೆ ಪೂರ್ಣಗೊಳಿಸಲು ಸಾಧ್ಯವಾ ಗಿಲ್ಲ ಹೀಗಾಗಿ ವರ್ಗಾವಣೆ ಪ್ರಕ್ರಿಯೆಯನ್ನು ಇಲಾಖೆ ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಶಿಕ್ಷಕರು ಒತ್ತಾಯಿಸುತ್ತಿದ್ದಾರೆ.