ಶಿವಮೊಗ್ಗ –
ಈ ಬಾರಿಯ ಬಜೆಟ್ ನಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ಕೇಂದ್ರದ ಮಾದರಿ ವೇತನ ಘೋಷಣೆಯಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷಾರಿ ಅವರು ಹೇಳಿದರು.ಮಾರ್ಚ್ 4 ಬಜೆಟ್‌ನಲ್ಲಿ ಘೋಷಿ ಸುವ ಸಾಧ್ಯತೆ ಇದೆ ಎಂದರು.ಶಿವಮೊಗ್ಗ ನಗರದ ಸರ್ಕಾರಿ ನೌಕರರ ಭವನದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀ ಯ ಸಿಬ್ಬಂದಿಗೆ ಏರ್ಪಡಿಸಿದ್ದ ತಾಂತ್ರಿಕ ವಿಚಾರಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದ ಅವರು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರದ ಮಾದರಿಯ ವೇತನ ನೀಡುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಇದು ಬಜೆಟ್‌ನಲ್ಲಿ ಘೋಷಣೆಯಾಗಲಿದೆ ಎಂದರು
ಇನ್ನೂ ರಾಜ್ಯದ ವಿವಿಧ ಇಲಾಖೆಗಳಲ್ಲಿ 2 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ.ಇದರ ಒತ್ತಡ ಈಗಿರುವ ನೌಕರರ ಮೇಲೆ ಬೀಳುತ್ತಿದೆ.ಪಶುಪಾಲನಾ ಇಲಾಖೆಯಲ್ಲಿ ಇರುವಂ ತಹ ಸಮಸ್ಯೆಗಳ ಕುರಿತು ಶೀಘ್ರ ಸಭೆ ನಡೆಸಲಾಗುವುದು. ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು.ಇಲಾಖಾ ಸಿಬ್ಬಂದಿ ಕುಂದು-ಕೊರತೆಗಳನ್ನೂ ಪರಿಹರಿಸಲಾಗುವುದು. ಪಶುಪಾಲನಾ ಇಲಾಖೆಯಲ್ಲಿ ಕೆಳ ಹಂತದಲ್ಲಿ ಕೆಲಸ ಮಾಡುವ ಸಿಬ್ಬಂದಿ ಮೂಕ ಪ್ರಾಣಿಗಳ ಸೇವೆ ಮಾಡುತ್ತಿರು ವುದು ಅತ್ಯಂತ ಪುಣ್ಯದ ಕೆಲಸ ಎಂದರು.ಇನ್ನೂ ಸರ್ಕಾರಿ ನೌಕರರ ಹಲವು ಬೇಡಿಕೆ ಕುರಿತು ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗಿದೆ.ಹೊಸ ಪಿಂಚಣಿ ಪದ್ಧತಿ ರದ್ದು ಗೊಳಿಸಿ ಹಳೆ ಪಿಂಚಣಿ ಪದ್ಧತಿಯನ್ನು ಜಾರಿಗೊಳಿಸಬೇಕು ಹಾಗೂ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವನ್ನು ಕೂಡ ಸರ್ಕಾರಕ್ಕೆ ಮಾಡಲಾಗಿದೆ ಎಂದರು ಇನ್ನೂ ಈ ಒಂದು ಕಾರ್ಯಕ್ರಮ ದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ನಾಗೇಂದ್ರ ಎಫ್.ಹೊನ್ನಳ್ಳಿ, ಪಶು ಪಾಲನಾ ಇಲಾಖೆಯ ಉಪ ನಿರ್ದೇಶಕ ಶಿವರುದ್ರಪ್ಪ ಎಲಿ,ಪಶು ವೈದ್ಯಾಧಿಕಾರಿಗಳಾದ ಡಾ.ಕೆ.ಎಂ.ಪ್ರಸನ್ನ, ಡಾ.ಕೆ.ಎಂ.ನಾಗರಾಜ್,ಡಾ.ಅರವಿಂದ್,ಡಾ.ಮಹದೇವ್ ಶರ್ಮಾ ಇದ್ದರು.