ಬೆಂಗಳೂರು –
2021-22ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು,ತತ್ಸಮಾನ ವೃಂದದ ನಿರ್ಧಿಷ್ಟ ಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ,ಭರ್ತಿ ಮಾಡಲು ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿ ದ್ದು ಪ್ರಾಥಮಿಕ ಶಾಲಾ ಸಹಶಿಕ್ಷಕರ ವರ್ಗಾವಣೆಗೆ ಸಂಬಂ ಧಿಸಿದಂತೆ ವಿಭಾಗದ ಹೊರಗಿನ ವರ್ಗಾವಣೆಗೆ ನ್ಯಾಯಾಲ ಯವು ತಡೆಯಾಜ್ಞೆ ನೀಡಿರುವುದರಿಂದ ಈ ಹುದ್ದೆಗಳ ವರ್ಗಾವಣೆಯನ್ನು ಮಾತ್ರ ತಾತ್ಕಾಲಿಕವಾಗಿ ಮುಂದೂಡ ಲಾಗಿದೆ.ಉಳಿದಂತೆ ಎಲ್ಲಾ ವರ್ಗಾವಣೆಗಳು ಮುಕ್ತಾಯ ವಾಗಿದೆ
2021-22ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಪ್ರೌಢ ಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ಧಷ್ಟ ಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಭರ್ತಿ ಮಾಡುವ ಸಂಬಂಧ ಕೆಳಕಂಡಂತೆ ಪರಿಷ್ಕೃತ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ ಎಂದಿದ್ದಾರೆ.
ಪರಿಷ್ಕೃತ ವೇಳಾಪಟ್ಟಿಯಂತೆ ದಿನಾಂಕ 03-03-2022ರ ನಿಂದೆನಿಂದ ತಾತ್ಕಾಲಿಕ ಪಟ್ಟಿಗೆ ಅಭ್ಯರ್ಥಿಗಳಿಂದ ಆಕ್ಷೇ ಪಣೆ ಸ್ವೀಕರಿಸೋದಕ್ಕೆ ಆರಂಭಗೊಳ್ಳಲಿದೆ.ದಿನಾಂಕ 07-03-2022ರಂದು ತಾತ್ಕಾಲಿಕ ಅರ್ಹತಾ ಪಟ್ಟಿ ಪ್ರಕಟಿಸ ಲಾಗುತ್ತದೆ.
ದಿನಾಂಕ 14-03-2022ರಂದು ಸಿ ಆರ್ ಪಿ, ಬಿಆರ್ ಪಿ, ಶಿಕ್ಷಣ ಸಂಯೋಜಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು, ತತ್ಸಮಾನ ಹುದ್ದೆಗಳ ಖಾಲಿ ಹುದ್ದೆಗಳನ್ನು ಪ್ರಕಟಿಸಲಾಗುತ್ತದೆ. ದಿನಾಂಕ 15-03-2022ರಿಂದ ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ಶುರುವಾಗಲಿದೆ.