ಬೆಳಗಾವಿ –
ಪೊನ್ ಪೇ ನಲ್ಲಿ ಲಂಚ ಪಡೆದ ಇಬ್ಬರು ಎಸಿಬಿ ಬಲೆಗೆ ಬಿದ್ದ ಘಟನೆ ಬೆಳಗಾವಿ ಯಲ್ಲಿ ನಡೆದಿದೆ ಹೌದು ಪಿತ್ರಾರ್ಜಿತ ಆಸ್ತಿ ಪರಭಾರೆಗೆ ಸಂಬಂಧಿಸಿದ ದಾಖಲಾತಿಗಳನ್ನು ನೀಡಲು ಲಂಚ ಕೇಳಿದ ಜಿಲ್ಲೆಯ ಸವದತ್ತಿ ತಾಲ್ಲೂಕು ಮುರಗೋಡದ ಸಬ್ ರಿಜಿಸ್ಟ್ರಾರ್ ಮತ್ತು ಸಬ್ ರಿಜಿಸ್ಟ್ರಾರ್ ಪರವಾಗಿ ಹಣ ಪಡೆಯುತ್ತಿದ್ದ ಬಾಂಡ್ ರೈಟರ್ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ. ಸಬ್ ರಿಜಿಸ್ಟ್ರಾರ್ ಸಂಜೀವ ವೀರಭದ್ರ ಕಪಾಲಿ ಹಾಗೂ ಬಾಂಡ್ ರೈಟರ್ ಶಿವಯೋಗಿ ಶಂಕರಯ್ಯ ಮಲ್ಲಯ್ಯನವರ ಆರೋಪಿಗಳಾಗಿದ್ದಾರೆ.ಅವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಸಬ್ ರಿಜಿಸ್ಟ್ರಾರ್ ದಾಖಲೆ ಪತ್ರಗಳನ್ನು ನೀಡಲು ವಿನಾಕಾ ರಣ ವಿಳಂಬ ಧೋರಣೆ ತೋರುತ್ತಿರುವುದಲ್ಲದೆ ಪ್ರಶ್ನಿಸಿದರೆ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಸವದತ್ತಿ ತಾಲ್ಲೂಕಿನ ಕೊಡ್ಲಿವಾಡ ಗ್ರಾಮದ ಶಿವಪ್ಪ ವರಗಣ್ಣವರ ಎನ್ನುವವರು ಎಸಿಬಿಗೆ ದೂರು ನೀಡಿದ್ದರು.₹4ಸಾವಿರ ಲಂಚ ಪಡೆಯು ವಾಗ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿ ದ್ದಾರೆ.
ದೂರಿನ ಆಧಾರದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಬಿ (ಉತ್ತರ ವಲಯದ) ಎಸ್ಪಿ ಬಿ.ಎಸ್. ನೇಮಗೌಡ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕರುಣಾಕರಶೆಟ್ಟಿ ಮತ್ತು ಇನ್‌ಸ್ಪೆಕ್ಟರ್ ಎ.ಎಸ್. ಗುದಿಗೊಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.