ತೆಲಂಗಾಣ –
ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರಿಗೆ ಲಘು ಹೃದಯಾಘಾತವಾಗಿದ್ದು ಅವರನ್ನು ಹೈದರಾಬಾದ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಧ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಆದರೆ ಕೆಲವು ವರದಿ ಪ್ರಕಾರ ಚಂದ್ರಶೇಖರ್ ರಾವ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.ಆಯಂಜಿಯೋಗ್ರಾಮ್ ಪರೀಕ್ಷೆಯಲ್ಲಿ ಯಾವುದೇ ಬ್ಲಾಕ್ ಪತ್ತೆಯಾಗಿಲ್ಲ.ಕೆಸಿಆರ್ ಗೆ ಯಾವುದೇ ರೀತಿಯ ಹೃದಯ ಸಂಬಂಧಿ ಸಮಸ್ಯೆ ಇಲ್ಲ ಎಂದು ಯಶೋಧಾ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಹಿರಿಯ ವೈದ್ಯ ಪ್ರಮೋದ್ ಕುಮಾರ್ ಅವರ ಸಲಹೆ ಮೇರೆಗೆ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ಅವರು ವಿವಿಧ ರೀತಿಯ ಪರೀಕ್ಷೆಗೆ ಒಳಗಾಗಿದ್ದರು.ಎಡಗೈಯಲ್ಲಿ ನೋವು ಕಾಣಿಸಿಕೊಂಡ ನಂತರ ಕೆಸಿಆರ್ ಯಶೋಧಾ ಆಸ್ಪತ್ರೆಗೆ ಭೇಟಿ ನೀಡಿರುವ ವಿಚಾರ ತಿಳಿದಿರುವುದಾಗಿ ವಿವರಿಸಿದ್ದು ಹೆಚ್ಚಿನ ಮಾಹಿತಿ ವಿವರವನ್ನು ನಿರೀಕ್ಷೆ ಮಾಡಲಾಗುತ್ತಿದೆ
