ಬೆಂಗಳೂರು –
ಸರ್ಕಾರಿ ನೌಕರರಿಗೆ ಜ್ಯೋತಿ ಸಂಜೀವಿನಿ ಯೋಜನೆಯಡಿ 7 ಗಂಭೀರ ಹಾಗೂ ಮಾರಣಾಂತಿಕ ಕಾಯಿಲೆಗಳಿಗೆ ನಗದು ರಹಿತ ಚಿಕಿತ್ಸೆ ನೀಡಲಾಗುತ್ತಿದೆ.ಅದೇ ರೀತಿ ಉಳಿದ ಕಾಯಿಲೆಗಳಿಗೂ ಯೋಜನೆಯನ್ನು ವಿಸ್ತರಣೆ ಮಾಡುವ ಪರಿಶೀಲನೆ ನಡೆಯುತ್ತಿದ್ದು ಆ ವೇಳೆ ನಿವೃತ್ತ ನೌಕರರನ್ನು ಈ ಯೋಜನೆಗೆ ಒಳಪಡಿಸುವ ಬಗ್ಗೆ ಪರಿಶೀಲಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿ ದರು.ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಅವರು 2015 ರಿಂದ ಜ್ಯೋತಿ ಸಂಜೀವಿನಿ ಜಾರಿಯಲ್ಲಿದೆ.ಹೃದ್ರೋಗ,ನರ ರೋಗ ಕ್ಯಾನ್ಸರ್,ಮೂತ್ರಪಿಂಡ ಸಮಸ್ಯೆ,ಸುಟ್ಟಗಾಯ,ಅಪಘಾತ, ನವಜಾತ ಶಿಶು ಹಾಗೂ ಚಿಕ್ಕಮಕ್ಕಳ ಕಾಯಿಲೆಗಳಿಗೆ ವಿವಿಧ ಶಸ್ತ್ರಚಿಕಿತ್ಸೆ ಹಾಗೂ ನಗದು ರಹಿತ ಚಿಕಿತ್ಸೆ ನೀಡಲಾ ಗುತ್ತಿದೆ.ಇದನ್ನು ಇತರ ಮಾರಣಾಂತಿಕ ಕಾಯಿಲೆಗಳಿಗೂ ವಿಸ್ತರಣೆ ಮಾಡಬೇಕು ಎಂಬ ಬೇಡಿಕೆಯನ್ನು ಪರಿಶೀಲನೆ ನಡೆಸಲಾಗುತ್ತಿದೆ.ನಿವೃತ್ತ ಸರ್ಕಾರಿ ನೌಕರರಿಗೆ ಈ ಯೋಜನೆ ಅನ್ವಯಿಸುತ್ತಿಲ್ಲ.ಆದರೆ ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದರು.
ಇನ್ನೂ ರಾಜ್ಯ ಸರ್ಕಾರದಲ್ಲಿ 32 ಪ್ರಧಾನ ಇಲಾಖೆಗಳಿಗೆ 7,68,975 ಹುದ್ದೆಗಳು ಮಂಜೂರಾಗಿದ್ದು ಇವುಗಳಲ್ಲಿ 5,16,073 ಹುದ್ದೆಗಳು ಭರ್ತಿಯಾಗಿವೆ.2,52,902 ಹುದ್ದೆ ಗಳು ಖಾಲಿ ಇವೆ ಎಂದು ಮುಖ್ಯಮಂತ್ರಿಯವರು ಜೆಡಿಎಸ್ ನ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರ ಪ್ರಶ್ನೆಗೆ ಉತ್ತರಿಸಿದರು.ಕೋವಿಡ್‍ನಿಂದಾಗಿ ನೇಮಕಾತಿಗೆ ನಿರ್ಬಂಧ ಗಳಿದ್ದವು.ಆದರೂ ಅಗತ್ಯ ಸೇವೆಗಳನ್ನು ನೀಡುವ ಶಿಕ್ಷಣ,ಪೊಲೀಸ್ ಸೇರಿದಂತೆ ವಿವಿಧ ಇಲಾಖೆ ಗಳಿಗೆ ನೇಮಕಾತಿಗೆ ನಿರ್ಬಂಧ ವಿಧಿಸಿಲ್ಲ.15ಸಾವಿರ ಸರ್ಕಾರಿ ಶಿಕ್ಷಕರ ನೇಮಕಾತಿಗೆ ಅನುಮತಿ ನೀಡಲಾಗಿದೆ. ಸದಸ್ಯರ ಪ್ರಸ್ತಾವನೆಯಂತೆ ಖಾಸಗಿ ಅನುದಾನಿತ ಹುದ್ದೆ ಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೂ ಹಂತ ಹಂತವಾಗಿ ಅನುಮತಿ ನೀಡಲಾಗುವುದು ಎಂದು ಭರವಸೆ ನೀಡಿದರು.