ಬಾಗಲಕೋಟೆ –
ಇತ್ತೀಚೆಗೆ ಅಪಘಾತದಲ್ಲಿ ಗಾಯಗೊಂಡು ಚೇತರಿಸಿಕೊಂ ಡಿರುವ ಬಾಗಲಕೋಟೆ ಜಿಲ್ಲೆಯ ಶಿಕ್ಷಕರ ಸಂಘದ ಖಜಾಂಚಿ ಮುತ್ತು ಬೀಳಗಿ ಇವರ ನಿವಾಸಕ್ಕೆ KSPSTA ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ್ ಮತ್ತು ಬಾಗಲಕೋಟೆ ಜಿಲ್ಲೆಯ ಶಿಕ್ಷಕರ ಸಂಘದ ಸರ್ವ ಸದಸ್ಯರು ಭೇಟಿ ನೀಡಿ ಆರೋಗ್ಯ ವನ್ನು ವಿಚಾರಣೆ ಮಾಡಿದರು
ಹೌದು ಜಿಲ್ಲಾ ಖಜಾಂಚಿಗಳು ಇವರ ಇಳಕಲ್ ನಿವಾಸಕ್ಕೆ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಶಂಭುಲಿಂಗನಗೌಡ ಪಾಟೀಲ್ ರವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು ಈ ಸಂದರ್ಭದಲ್ಲಿ ಇಳಕಲ್ ನೌಕರ ಸಂಘದ ಅಧ್ಯಕ್ಷರಾದ ಪರಶುರಾಮ ಪಮ್ಮಾರ,ಇಳಕಲ್ ಶಿಕ್ಷಕರ ಸಂಘದ ಅಧ್ಯಕ್ಷ ರಾದ ರಂಗನಾಥ ಮಾಸರಡ್ಡಿ,ಹುನಗುಂದ ತಾಲ್ಲೂಕು ಅಧ್ಯಕ್ಷರಾದ ಸಿದ್ದು ಶೀಲವಂತರ,ನೌಕರರ ಹಾಗೂ ಶಿಕ್ಷಕರ ಸಂಘದ ಪದಾಧಿಕಾರಿಗಳು,ಕುಕನೂರು ನೌಕರರ ಸಂಘದ ಅಧ್ಯಕ್ಷರಾದ ಮಹೇಶ ಸಬರದ,ಯಲಬುರ್ಗಾ ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷರಾದ ಎಸ್ ವಿ ಧರಣಾ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದಲಿಂಗಪ್ಪ ಶ್ಯಾಗೋಟಿ, ಸೇರಿದಂತೆ ಗುರುಮಾತೆಯರು ಗುರುಗಳು ಈ ಒಂದು ಸಮಯದಲ್ಲಿ ಉಪಸ್ಥಿತರಿದ್ದರು.