ಹಾಸನ –
ಡಿಸೆಂಬರ್‌ನೊಳಗೆ ಬಡಾವಣೆ ನಿರ್ಮಿಸಿ ಎಲ್ಲಾ ಸರ್ಕಾರಿ ನೌಕರರಿಗೆ ಮಾರುಕಟ್ಟೆ ದರಕ್ಕಿಂತ ಶೇ 30ರಿಂದ 40ರಷ್ಟು ಕಡಿಮೆ ದರಕ್ಕೆ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ಶಾಸಕ ಪ್ರೀತಂ ಜೆ. ಗೌಡ ಭರವಸೆ ನೀಡಿದರು. ನಗರದ ಮಹಾವೀರ ವೃತ್ತದ ಬಳಿ ಇರುವ ಗುರುಭವನ ದಲ್ಲಿ ಜಿಲ್ಲಾ ಸರ್ಕಾರಿ ಅರೆ ಸರ್ಕಾರಿ ಹಾಗೂ ನಿಗಮ ಮಂಡಳಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ಹಾಗೂ ಜಿಲ್ಲಾ ಮತ್ತು ರಾಜ್ಯ ಸರ್ಕಾರಿ ನೌಕರರ ಕೋ ಆಪರೇಟಿವ್ ಸೊಸೈಟಿ ಆಶ್ರಯದಲ್ಲಿ ಭಾನುವಾರ ಹಮ್ಮಿ ಕೊಂಡಿದ್ದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ವಿವಿಧ ರಂಗದಲ್ಲಿ ಸಾಧನೆ ಮಾಡಿರುವ ಮಹಿಳಾ ಸಾಧಕಿಯರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಾಸನ ನಗರ ವೇಗವಾಗಿ ಬೆಳೆಯುತ್ತಿದೆ.ನಗರದಲ್ಲಿ ಒಂದು ನಿವೇಶನ ಕೊಳ್ಳುವುದು ಕಷ್ಟದ ವಿಷಯ.ಹಾಗಾಗಿ ಈ ಹಿಂದೆ ಕೆಎಸ್‌ಆರ್‌ಟಿಸಿ ನೌಕರರಿಗೆ ನಿವೇಶನ ನಿರ್ಮಿಸಿಕೊ ಟ್ಟಂತೆ ಎಲ್ಲಾ ಸರ್ಕಾರಿ ನೌಕರರಿಗೆ ಬಡಾವಣೆ ನಿರ್ಮಿಸಲಾ ಗುವುದು ಎಂದರು.
ಜಿಲ್ಲಾ ಸರ್ಕಾರಿ ನೌಕರರ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಕೆ.ಎಂ.ಶ್ರೀನಿವಾಸ್,ಲೇಖಕಿ ಶೈಲಜಾ ಹಾಸನ್, ಸರ್ಕಾರಿ ಕಲಾ ಕಾಲೇಜು ಇತಿಹಾಸ ಸಹ ಪ್ರಾಧ್ಯಾಪಕಿ ಎಚ್.ಎಸ್.ವಿದ್ಯಾ,ಭಾರತ್ ಸ್ಕೌಟ್ ಅಂಡ್ ಗೈಡ್ಸ್ ಜಂಟಿ ಕಾರ್ಯದರ್ಶಿ ಎಚ್.ಜಿ.ಕಾಂಚನಮಾಲಾ,ಜಿಲ್ಲಾ ಪ್ರಾಥ ಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎನ್. ರಾಜಶೇಖ ರಪ್ಪ,ತಾಲ್ಲೂಕು ಅಧ್ಯಕ್ಷೆ ಡಿ.ಎನ್.ದಾಕ್ಷಾಯಿಣಿ,ಉಪಾಧ್ಯಕ್ಷ ಆರ್.ಸಿ.ಭೈರಪ್ಪ,ರಾಜ್ಯ ಸರ್ಕಾರಿ ನೌಕರರ ಕೋ- ಆಪರೇ ಟಿವ್ ಸೊಸೈಟಿ ಉಪಾಧ್ಯಕ್ಷ ಎಚ್.ಆರ್.ಯಶೋಧರ್ ಇದ್ದರು.