ಬೆಂಗಳೂರು –
ಮಾರ್ಚ್ 28 ರಿಂದ ರಾಜ್ಯದಲ್ಲಿ SSLC ಪರೀಕ್ಷೆ ಗಳು ನಡೆಯಲಿವೆ.ಈ ಒಂದು ಹಿನ್ನಲೆಯಲ್ಲಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಅಧಿಕಾರಿ ಗಳೊಂದಿಗೆ ಸಭೆಯನ್ನು ಮಾಡಿದರು.
ಪರೀಕ್ಷೆ ನಡೆಯುವ ಹಿನ್ನಲೆಯಲ್ಲಿ 10ನೇ ತರಗತಿ ಪರೀಕ್ಷೆ ಸುಸೂತ್ರವಾಗಿ ನಡೆಸಲು ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳು,ಜಿಲ್ಲೆಗಳ ಉಪ ನಿರ್ದೇಶಕರು,ಕ್ಷೇತ್ರ ಶಿಕ್ಷಣಾಧಿಕಾರಿಗಳ ಜೊತೆ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಿಂದ ವರ್ಚ್ಯುಯಲ್ ಸಭೆ ನಡೆಸಲಾಯಿತು.ಹಾಗೆ ಯಾವುದೇ ತೊಂದರೆಯಾಗದಂತೆ ಸರಳವಾಗಿ ಪರೀಕ್ಷೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ಯನ್ನು ನೀಡಲಾ ಯಿತು.