ಬೆಂಗಳೂರು –
ರಾಜ್ಯ ಸರ್ಕಾರಿ ನೌಕರರಿಗೆ ಬಾಕಿ ಇರುವ ತುಟ್ಟಿಭತ್ಯೆಯನ್ನು ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರು ಒತ್ತಾಯವನ್ನುಮಾಡಿದ್ದಾರೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಾಜ್ಯದ ಸಮಸ್ತ ನೌಕರರ ಪರವಾಗಿ ಪತ್ರವನ್ನು ಬರೆದ ಅವರು ಈ ಒಂದು ಆಗ್ರಹವನ್ನು ಮಾಡಿದ್ದಾರೆ.

ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿ ಭತ್ಯೆಯನ್ನು ಮಂಜೂ ರು ಮಾಡಿದ ದಿನಾಂಕ ದಿಂದಲೇ ರಾಜ್ಯ ಸರ್ಕಾರವು ರಾಜ್ಯದ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆಯನ್ನು ಮಂಜೂರು ಮಾಡುವುದು ಸಂಪ್ರದಾಯ ವಾಗಿರುತ್ತದೆ ಹೀಗಾಗಿ ಕೂಡಲೇ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅವರಿಗೆ ಸಮಸ್ತ ರಾಜ್ಯದ ಸರ್ಕಾರಿ ನೌಕರರ ಪರವಾಗಿ ಷಡಾಕ್ಷರಿ ಅವರು ಪತ್ರವನ್ನು ಬರೆದು ಒತ್ತಾಯವನ್ನು ಮಾಡಿದ್ದಾರೆ.