ಬೆಂಗಳೂರು –
SSLC ಯ ಸಮಾಜ ಶಾಸ್ತ್ರ ವಿಷಯದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ವದಂತಿ ಹರಡಿ ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿಸಿದ ಘಟನೆ ನಡೆದಿದೆ.ಇಂದು ನಡೆದ ಸಮಾಜ ಶಾಸ್ತ್ರ ವಿಷಯದ ಪರೀಕ್ಷೆ ಆರಂಭವಾದ ಒಂದು ಗಂಟೆಯ ನಂತರ ಮೊಬೈಲ್ ಗಳಲ್ಲಿ ಪ್ರಶ್ನೆಪತ್ರಿಕೆ ಹರಿದಾ ಡಿದೆ.ಇದು ರಾಯಚೂರು ನಗರದ ಪರೀಕ್ಷಾ ಕೇಂದ್ರವೊಂದ ರಿಂದ ಸೋರಿಕೆಯಾಗಿದೆ ಎನ್ನುವ ವದಂತಿ ಹರಡಿದೆ. ಆದರೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಪರಿಶೀಲನೆ ಮಾಡಿದಾಗ ಮುದ್ದೇಬಿಹಾಳ ತಾಲೂಕಿನ ಪರೀಕ್ಷಾ ಕೇಂದ್ರವೊಂದರ ಪ್ರಶ್ನೆಪತ್ರಿಕೆ ಎನ್ನುವುದು ಗೊತ್ತಾಗಿದೆ.
ಈ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳು ಯಾವುದೇ ದೂರು ನೀಡಿಲ್ಲ ಆದರೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ. ಯಾರೋ ಕಿಡಿಗೇಡಿಗಳು ವದಂತಿ ಹರಡಿಸಿದ್ದಾರೆ. ಅಧಿಕಾರಿಗಳು ಹಾಗೂ ಪೊಲೀಸರ ನೇತೃತ್ವದಲ್ಲಿ ಪರೀಕ್ಷಾ ಕೇಂದ್ರಗಳಿಗೆ ಬಿಗಿ ಭದ್ರತೆಯಲ್ಲಿ ಪ್ರಶ್ನೆಪತ್ರಿಕೆ ತಲುಪಿಸಲಾ ಗುತ್ತಿದೆ.ಯಾವುದೇ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿಲ್ಲವೆಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.