ಬೆಂಗಳೂರು –
ಸರ್ಕಾರಿ ನೌಕರರ ದಿನಾಚರಣೆಗೆ ರಾಜ್ಯ ಸರ್ಕಾರ ವಿಶೇಷ ಅನುದಾನವನ್ನು ಬಿಡುಗಡೆ ಮಾಡಿದೆ ಹೌದು ಏಪ್ರಿಲ್ 21 ರಂದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಆಯೋಜಿಸಲು ರಾಜ್ಯ ಸರ್ಕಾರವು ಪ್ರತಿ ಜಿಲ್ಲೆಗೆ 1 ಲಕ್ಷ ರೂ. ಅನುದಾನವನ್ನು ಬಿಡುಗಡೆ ಮಾಡಿದೆ.

ಏಪ್ರಿಲ್ 21 ರಂದು ನಾಗರಿಕ ಸೇನಾ ದಿನವನ್ನು ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನಾಗಿ ಆಚರಿಸಲು ರಾಜ್ಯ ಸರ್ಕಾರವು ಆದೇಶಿಸಿತ್ತು.ಜೊತೆಗೆ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ದಿನ ಅತ್ಯುತ್ತಮ ಸೇವೆ ಸಲ್ಲಿಸಿದ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೀಡಲು ಆದೇಶ ಹೊರಡಿಸಿತ್ತು.


ಈ ಹಿನ್ನೆಲೆಯಲ್ಲಿ ಏಪ್ರಿಲ್ 21 ರಂದು ಎಲ್ಲಾ ಜಿಲ್ಲೆಗಳಲ್ಲೂ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಆಯೋಜಿ ಸಲು ಸಿದ್ಧತೆ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಾರ್ಯಕ್ರಮ ಆಯೋಜನೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನಕ್ಕೆ ಅವಶ್ಯವಿರುವ ಹಾರ,ಶಾಲು,ಸ್ಮರಣಿಕೆ ಹಾಗೂ ಇತರೆ ವೆಚ್ಚಗಳಿಗಾಗಿ ಪ್ರತಿ ಜಿಲ್ಲೆಗೆ 1 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.