ಬೆಂಗಳೂರು –
ಹೌದು 2022-23ನೇ ಸಾಲಿನ ಹೊಸ ಶೈಕ್ಷಣಿಕ ಚಟುವಟಿ ಕೆಗಳ ವಾರ್ಷಿಕ ಕಾರ್ಯಸೂಚಿಯನ್ನು ಬಿಡುಗಡೆ ಮಾಡ ಲಾಗಿದೆ.ಕಳೆದ ಮೂರು ವರ್ಷಗಳಲ್ಲಿನ ಕಲಿಕಾ ಕೊರತೆ ಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಈ ಬಾರಿ ಬೇಸಿಗೆ ರಜೆಯನ್ನು ಕಡಿತ ಮಾಡಿ ಮುಂಚಿತವಾಗಿ ಶಾಲೆಗಳನ್ನು ಆರಂಭ ಮಾಡಲಾಗುತ್ತಿದ್ದು ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ 2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕಾರ್ಯಸೂಚಿಯನ್ನು ಬಿಡುಗಡೆ ಮಾಡಲಾಗಿದೆ.
ಈ ವೇಳಾಪಟ್ಟಿಯಂತೆ ಪ್ರಸಕ್ತ ವರ್ಷವನ್ನು ಕಲಿಕಾ ಚೇತರಿಕೆ ವರ್ಷವೆಂದು ಸಂಕಲ್ಪಿಸಲಾಗಿದ್ದು ವಾರ್ಷಿಕ ಪಠ್ಯವಸ್ತು ಬೋಧನೆಯನ್ನು ಕಲಿಕಾ ಚೇತರಿಕೆ ಕಾರ್ಯ ಕ್ರಮದೊಂದಿಗೆ ಸಂಯೋಜಿಸಿ ವಾರ್ಷಿಕ ಕಾರ್ಯಸೂಚಿ ಯನ್ನು ತಯಾರಿಸಲಾಗಿದೆ.
2022-23ನೇ ಶೈಕ್ಷಣಿಕ ವೇಳಾಪಟ್ಟಿಯಂತೆ ದಿನಾಂಕ 14-05-2022 ರಿಂದ ಶಾಲೆ ಪ್ರಾರಂಭ ಮತ್ತು ಪ್ರಾರಂಭೋ ತ್ಸವದ ಪೂರ್ವ ಸಿದ್ಧತೆ ಆರಂಭಗೊಳ್ಳಲಿದೆ.
2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕಾರ್ಯಸೂಚಿ ಪಟ್ಟಿ ಈ ಕೆಳಗಿನಂತೆ ಇದೆ
ದಿನಾಂಕ 16-05-2022ರಿಂದ ಶಾಲಾ ಪ್ರಾರಂಭೋತ್ಸವ ಶುರುವಾಗಲಿದೆ. ಅಲ್ಲದೇ ದಿನಾಂಕ 03-10-2022 ರಿಂದ ದಿನಾಂಕ 16-10-2022ರವರೆಗೆ ದಸರಾ ರಜೆಯನ್ನು ಘೋಷಿಸಲಾಗಿದೆ.