ಬೆಂಗಳೂರು –
ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ 22000 ಶಿಕ್ಷಕರನ್ನು ನೇಮಕಾತಿ ಮಾಡಿ ಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ.

2022 -23ನೇ ಸಾಲಿಗೆ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು.ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿದೆ.ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು.ಸಂಬಂಧಿಸಿದ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರ ಮೂಲಕವೇ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕಿದ್ದು ಅತಿಥಿ ಶಿಕ್ಷಕರಿಗೆ 7500 ರೂ ಗೌರವ ಸಂಭಾವನೆ ನಿಗದಿಪಡಿಸಲಾಗಿದೆ.






















