ಬೆಂಗಳೂರು –
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಮಾತೆ ಸಾವಿತ್ರಿಬಾಯಿ ಫುಲೆಯವರ ಜನ್ಮದಿನಾಚರಣೆಯ ಶುಭದಿನ ದಂದು ಸಾವಿತ್ರಿಬಾಯಿ ಫುಲೆಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕಾರಿ ಸಮಿತಿ ಸಭೆಯನ್ನು ಪ್ರಾರಂಭಿ ಸಲಾಯಿತು. ಸಂಘಟನೆಯ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ಯವರ ಅಧ್ಯಕ್ಷತೆಯಲ್ಲಿ ನಡೆದ ಈ ಒಂದು ಸಭೆಯಲ್ಲಿ ಹಲವಾರು ವಿಚಾರಗಳ ಕುರಿತು ಚರ್ಚೆ ಮಾಡಿ ಸಭೆಯಲ್ಲಿ ಹಲವು ತೀರ್ಮಾನ ಗಳನ್ನು ಕೈಗೊಳ್ಳಲಾಯಿತು
ಫೆಬ್ರವರಿ ತಿಂಗಳ ಕೊನೆಯ ವಾರದಲ್ಲಿ ರಾಜ್ಯಮಟ್ಟದ ಬೃಹತ್ ಶೈಕ್ಷಣಿಕ ಸಮಾವೇಶ ಮತ್ತು ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲು ಸರ್ವಾನುಮತದಿಂದ ಸಭೆ ತೀರ್ಮಾನಿಸಿತು.
ಕಳೆದ ಐದು ತಿಂಗಳುಗಳಲ್ಲಿ ಶಿಕ್ಷಕರ ಸಂಘಟನೆಯ ನಿರಂತರ ಪ್ರಯತ್ನದಿಂದ 23 ಆದೇಶಗಳನ್ನು ಮಾಡಿಸಲಾಗಿದ್ದು, ಮುಂದಿನ ಆರು ತಿಂಗಳುಗಳ ಒಳಗಾಗಿ ಇನ್ನೂ ಹಲವು ಮಹತ್ವದ ಆದೇಶ ಗಳನ್ನು ಶಿಕ್ಷಕರಿಗೆ ಮಾಡಿಸುವುದು
ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಹುದ್ದೆಯಿಂದ ಮುಖ್ಯಗುರುಗಳ ಹುದ್ದೆಗೆ ಬಡ್ತಿ ಕೊಡಿಸುವುದು. ಪ್ರಾಥಮಿಕ ಶಾಲೆಯಿಂದ ಪ್ರೌಢ ಶಾಲೆಗೆ ಬಡ್ತಿ ಕೊಡಿಸುವುದು. ಪದವಿ ಪೂರೈಸಿದ ಶಿಕ್ಷಕರಿಗೆ ಆರ್ಥಿಕ ಸೌಲಭ್ಯವನ್ನು ದೊರಕಿಸಿಕೊಡುವುದು.ಹೀಗೆ ಇನ್ನೂ ಹತ್ತು ಹಲವು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಮಟ್ಟದ ಬೃಹತ್ ಶೈಕ್ಷಣಿಕ ಸಮಾವೇಶವನ್ನು ಸಂಘಟಿಸಿ, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಶಿಕ್ಷಣ ಸಚಿವರು ಹಾಗೂ ಸಹಕಾರ ನೀಡಿದ ಸಂಪುಟದ ಗೌರವಾನ್ವಿತ ಸಚಿವರನ್ನು ಮತ್ತು ಹಿರಿಯ ಅಧಿಕಾರಿಗಳನ್ನು ಅಭಿನಂದಿಸುವ ಕಾರ್ಯಕ್ರಮಕ್ಕೆ ಸಿದ್ಧತೆಯನ್ನು ಮಾಡಿಕೊಳ್ಳುವ ಸರ್ವಾನುಮತದ ನಿರ್ಣಯವನ್ನು ಅಂಗೀಕರಿಸ ಲಾಯಿತು.
ಸಭೆಯಲ್ಲಿ ರಾಜ್ಯ ಸಂಘದ ಪದಾಧಿಕಾರಿಗಳು, ಎಲ್ಲಾ ಜಿಲ್ಲೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಿದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..



