ಮೈಸೂರು –
ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ದ್ವಿಚಕ್ರ ವಾಹನ ಸವಾರರಿಗೆ ಒಳ್ಳೇಯ ಸಂದೇಶ ನೀಡಿದ SP ಮಲ್ಲಿಕಾರ್ಜುನ ಬಾಲದಂಡಿ – ನಿಮ್ಮ ಸುರಕ್ಷತೆ ನಿಮ್ಮ ಕೈಯಲ್ಲಿದೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಪೊಲೀಸರ ಸಂದೇಶ…..
ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿಯವರು ಅಧಿಕಾರವನ್ನು ವಹಿಸಿಕೊಂಡಿದ್ದಾರೆ.ಅಧಿಕಾರವನ್ನು ವಹಿಸಿಕೊಂಡ ಬೆನ್ನಲ್ಲೇ ಜಿಲ್ಲೆಗೆ ನೂತನವಾಗಿ ಎಸ್ಪಿ ಯಾಗಿ ಬಂದಿರುವ ಇವರು ಸಾರ್ವಜನಿಕರಿಗೆ ಅದರಲ್ಲೂ ವಿಶೇಷವಾಗಿ ಬೈಕ್ ಸವಾರರಿಗೆ ಒಳ್ಳೇಯ ಸಂದೇಶವನ್ನು ನೀಡಿದ್ದಾರೆ
ಹೌದು ಇತ್ತೀಚಿಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೈಕ್ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮತ್ತು ಬೈಕ್ ಸವಾರರ ರಕ್ಷಣೆ ಮಾಡುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆಯನ್ನು ಇಟ್ಟಿರುವ ಮೈಸೂರು ಪೊಲೀಸರು ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿರಿ ನಿಮ್ಮ ಸುರಕ್ಷತೆ ನಿಮ್ಮ ಕೈಯಲ್ಲಿದೆ ಎಂಬ ಸಂದೇಶವನ್ನು ನೀಡಿದ್ದಾರೆ.ಯಾರು ಕೂಡಾ ನಿರ್ಲಕ್ಷ್ಯವನ್ನು ಮಾಡದಿರಿ ಕಡ್ಡಾಯವಾಗಿ ಈ ಒಂದು ಪೊಲೀಸರ ಸೂಚನೆ ಗಳನ್ನು ಪಾಲಿಸಿಸಿ ಎಂದು ಕಿವಿ ಮಾತು ಹೇಳಿದ್ದಾರೆ
ಇದರೊಂದಿಗೆ ಜಿಲ್ಲೆಗೆ ನೂತನವಾಗಿ ಪೊಲೀಸ್ ವರಿಷ್ಠಾಧಿಕಾ ರಿಯಾಗಿ ಆಗಮಿಸಿರುವ ಮಲ್ಲಿಕಾರ್ಜುನ ಬಾಲದಂಡಿಯವರು ಮಹತ್ವದ ಹೆಜ್ಜೆಯನ್ನು ಇಟ್ಟು ಸಾರ್ವಜನಿಕರ ರಕ್ಷಣೆಗೆ ಮುಂದಾಗಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಮೈಸೂರು……



