ಹುಬ್ಬಳ್ಳಿ –
ಹುಬ್ಬಳ್ಳಿಯಲ್ಲಿ ಅಕಾಲಿಕವಾಗಿ ಸುರಿದ ಧಾರಾಕಾರ ಮಳೆಯು ಒಂದಿಲ್ಲೊಂದು ರೀತಿಯಲ್ಲಿ ಅವಾಂತರವನ್ನು ಸೃಷ್ಟಿಸಿದ್ದು ಇನ್ನೂ ನಗರದಲ್ಲಿ ಧಾರಾಕಾರ ಮಳೆಗೆ ಮರ ಬಿದ್ದಿರುವ ಪರಿಣಾಮ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ನಗರದ ಬಸವರಾಜ ಹೊರಟ್ಟಿಯವರ ಮನೆಯ ಹತ್ತಿರದ ದೇಸಾಯಿ ಕ್ರಾಸ್ ನಲ್ಲಿ ಈ ಒಂದು ಘಟನೆ ನಡೆದಿದೆ. ಬಿರುಗಾಳಿ ಸಹಿತ ಸುರಿದ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದ್ದು ಚಲಿಸುತ್ತಿದ್ದ ಆಟೋ ಮೇಲೆ ಮರ ವೊಂದು ಉರುಳಿ ಬಿದ್ದಿರುವ ಪರಿಣಾಮ ಆಟೋದಲ್ಲಿದ್ದ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾನೆ.
ರೂಬಿ ಮೋರಿಸ್ ಎಂಬಾತನೇ ಮೃತ ದುರ್ದೈವಿಯಾಗಿದ್ದು, ಹುಬ್ಬಳ್ಳಿ ದೇಸಾಯಿ ಕ್ರಾಸ್ ಬಳಿ ನಡೆದ ಘಟನೆಯಲ್ಲಿ ಇಂತಹದೊಂದು ದೊಡ್ಡ ಅಪಘಾತ ಸಂಭವಿಸಿದೆ. ಈಗಾ ಗಲೇ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸಾಕಷ್ಟು ಅವಘಡ ಗಳು ಸಂಭವಿಸಿದ್ದು ಮತ್ತೋರ್ವ ಪ್ರಯಾಣಿಕರಿಗೆ ಗಾಯ ಗಳಾಗಿವೆ.ಇನ್ನೂ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದಿದ್ದು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.