ಧಾರವಾಡ –
ಧಾರವಾಡದಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ನಿಗೂಢ ಹತ್ಯೆ, ವಿನಯ್ ಕುಲಕರ್ಣಿ ಡೈರಿ ಬಳಿ ಶವ ಪತ್ತೆ ಹೌದು ವಿದ್ಯಾಕಾಶಿ ಧಾರವಾಡದಲ್ಲಿ ಮತ್ತೊಂದು ಭೀಕರ ಹತ್ಯೆ ನಡೆದಿದೆ 19 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ನಗರದ ಹೊರವಲಯದಲ್ಲಿ ಎಸೆದು ಪರಾರಿಯಾಗಿರುವ ಘಟನೆ ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ.
ಧಾರವಾಡದ ಗಾಂಧಿ ಚೌಕ್ ನಿವಾಸಿಯಾಗಿದ್ದ ಝಕಿಯಾ ಮುಲ್ಲಾ (19) ಕೊಲೆಯಾದ ದುರ್ದೈವಿಯಾಗಿದ್ದು ಪ್ಯಾರಾಮೆಡಿಕಲ್ ಶಿಕ್ಷಣ ಮುಗಿಸಿದ್ದ ಝಕಿಯಾ, ಉದ್ಯೋಗಕ್ಕಾಗಿ ಹುಡುಕಾಟ ನಡೆಸು ತ್ತಿದ್ದರು. ಮಂಗಳವಾರ ಸಂಜೆ ಮನೆಯಿಂದ ಲ್ಯಾಬ್ಗೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ಯುವತಿ, ರಾತ್ರಿಯಾದರೂ ಮನೆಗೆ ಹಿಂದಿರುಗಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದರು.
ಮನಸೂರು ರಸ್ತೆಯ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸೇರಿದ ವಿನಯ್ ಡೈರಿ ಸಮೀಪ ಯುವತಿಯ ಶವ ಪತ್ತೆಯಾಗಿದೆ. ಬೇರೆ ಯಾವುದೋ ಸ್ಥಳದಲ್ಲಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ, ನಂತರ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಇಲ್ಲಿಗೆ ತಂದು ಶವವನ್ನು ಬಿಸಾಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ ಸ್ಥಳಕ್ಕೆ ಧಾರವಾಡ ಗ್ರಾಮೀಣ ಹಾಗೂ ವಿದ್ಯಾಗಿರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ತಮ್ಮ ಮಗಳು ಕೊಲೆಯಾದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೋಷಕರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ‘ಕೆಲಸ ಹುಡುಕುತ್ತಿದ್ದ ಮಗಳಿಗೆ ಇಂತಹ ಸ್ಥಿತಿ ಬರಬಾ ರದಿತ್ತು’ ಎಂದು ಕಣ್ಣೀರಿಟ್ಟ ಕುಟುಂಬಸ್ಥರು, ಹಂತಕರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದಾರೆ. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಯುವತಿಯ ಮೊಬೈಲ್ ಕರೆಗಳ ಆಧಾರದ ಮೇಲೆ ತನಿಖೆ ಚುರುಕುಗೊಳಿಸಿದ್ದಾರೆ ಹತ್ಯೆಗೆ ಪ್ರೇಮ ಪ್ರಕರಣ ಕಾರಣವೇ ಅಥವಾ ಬೇರೆ ಯಾವುದಾದರೂ ದ್ವೇಷವಿದೆಯೇ ಎಂಬುದು ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.
ಸುದ್ದಿ ಸಂತೆ ನ್ಯೂಸ್ ಧಾರವಾಡ…..



