ಧಾರವಾಡ –
ಅಪರಿಚಿತ ವಾಹನವೊಂದು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಎಂಜಿನಿಯ ರಿಂಗ್ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿನ್ನೆ ತಡರಾತ್ರಿ ಧಾರವಾಡದಲ್ಲಿ ನಡೆದಿದೆ.ಹೌದು ಹಳಿಯಾಳ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಧಾರವಾಡದ ಶಕ್ತಿನಗರದ ನಿವಾಸಿಯಾಗಿದ್ದಾನೆ

ರೇಣುಕಾರಾಜ್ ಮೃತ ದುರ್ದೈವಿ ಎಂದು ಗುರುತಿಸಲಾ ಗಿದೆ.ನಿನ್ನೆ ರಾತ್ರಿ ಬೈಕ್ ತೆಗೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ಬಂದ ವಾಹನವೊಂದು ಡಿಕ್ಕಿ ಹೊಡೆದುಕೊಂಡು ಹೋಗಿದೆ.ಇದರಿಂದ ವಿದ್ಯಾರ್ಥಿ ಯ ತಲೆಗೆ ಗಂಭೀರ ಸ್ವರೂಪದ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ .ಘಟನಾ ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.























