ಬೆಂಗಳೂರು –
ರಾಜ್ಯದ ಸರ್ಕಾರಿ ನೌಕರರ ಹಲವು ದಿನದ ಬೇಡಿಕೆ ಯಾಗಿದ್ದ ಏಳನೇ ವೇತನ ಆಯೋಗ ಶೀಘ್ರ ಜಾರಿಯಾಗು ವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾ ಧ್ಯಕ್ಷರಾಗಿರುವ ಷಡಾಕ್ಷರಿ ಅವರು ಹೇಳಿದರು.ಈ ಕುರಿತಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ಕುರಿತಂತೆ ಈಗಾಗಲೇ ಎಲ್ಲಾ ಸಿದ್ದತೆಗಳನ್ನು ರಾಜ್ಯ ಸರ್ಕಾರ ಮಾಡಿ ಕೊಳ್ಳುತ್ತಿದ್ದು ಶೀಘ್ರದಲ್ಲೇ ಇದು ಕಾರ್ಯರೂಪಕ್ಕೆ ಬರಲಿದೆ ಎಂದರು.
ಇನ್ನೂ ಈಗಾಗಲೇ ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಘೋಷಣೆ ಮಾಡಿದ್ದು ಇದು ನೌಕರರಿಗೆ ಖುಷಿ ನೀಡಿದೆ. ಶೀಘ್ರದಲ್ಲೇ ಕಾರ್ಯರೂಪಕ್ಕೆ ಬರಲಿದೆ. ಇದಲ್ಲದೇ ನೌಕರರ ಮತ್ತೊಂದು ಬೇಡಿಕೆಯಾಗಿರುವ ಪಿಂಚಣಿ ವ್ಯವಸ್ಥೆಯನ್ನು ನೌಕರರ ಹಿತಕಾಯುವ ವ್ಯವಸ್ಥೆಯನ್ನು ಜಾರಿಗೆ ತರಲು ಪ್ರಯತ್ನ ನಡೆಸಲಾಗುತ್ತಿದ್ದು ಇದನ್ನು ಕೂಡಾ ಜಾರಿ ಮಾಡಿಸಲಾಗುತ್ತದೆ ಎಂದರು.