ರಾಜ್ಯದ ಶಿಕ್ಷಕರಿಗಾಗಿ ಹೊಸದಾಗಿ ಜಾರಿಗೆ ಬಂತು ಹೊಸ ಹಾಜರಾತಿ ವ್ಯವಸ್ಥೆ – ಹೊಸ ಹಾಜರಾತಿ ವ್ಯವಸ್ಥೆ ಕಡ್ಡಾಯ ತಪ್ಪಿದರೆ ಗೈರು…..

Suddi Sante Desk
ರಾಜ್ಯದ ಶಿಕ್ಷಕರಿಗಾಗಿ ಹೊಸದಾಗಿ ಜಾರಿಗೆ ಬಂತು ಹೊಸ ಹಾಜರಾತಿ ವ್ಯವಸ್ಥೆ – ಹೊಸ ಹಾಜರಾತಿ ವ್ಯವಸ್ಥೆ ಕಡ್ಡಾಯ ತಪ್ಪಿದರೆ ಗೈರು…..

ಬೆಂಗಳೂರು

ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ಶಿಕ್ಷಕರು, ಮುಖ್ಯ ಶಿಕ್ಷಕರು, ಉಪನ್ಯಾಸಕರು, ಪ್ರಾಂಶುಪಾಲರು, ಅಧಿಕಾರಿಗಳು ಬೋಧಕೇತರ ಸಿಬ್ಬಂದಿ, ಅಧಿಕಾರಿಗಳು ಕೆಎಎಎಂಎಸ್ ಮೊಬೈಲ್ ಅಪ್ಲಿಕೇಷನ್ ಮೂಲಕ ಹಾಜರಾತಿ ದಾಖಲಿಸುವುದು ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ.

2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ ಸಂಖ್ಯೆ 451ರಲ್ಲಿ “ಕೃತಕ ಬುದ್ಧಿಮತ್ತೆ (ಎಐ) ಮತ್ತು ಭೌಗೋಳಿಕ ಮಾಹಿತಿ ವ್ಯವಸ್ಥೆ (ಜಿಐಎಸ್) ಹಾಗೂ ಮುಖ ಚಹರೆ ಗುರುತಿಸುವ ಅಪ್ಲಿಕೇಶನ್‌ಗಳಂತಹ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿ ಕೊಂಡು ಎಲ್ಲಾ ಇಲಾಖೆಗಳಲ್ಲಿ ಕರ್ನಾಟಕ ಅಡ್ವಾನ್ಸ್ ಅಟೆಂಡೆನ್ಸ್ ಮ್ಯಾನೇಜೆಂಟ್ ಸಿಸ್ಟಮ್ (ಕರ್ತವ್ಯ ಕೆ.ಎ.ಎ.ಎಂ.ಎಸ್) ಅನ್ನು ಜಾರಿಗೆ ತರಲಾಗುವುದು” ಎಂದು ಮಾನ್ಯ ಮುಖ್ಯಮಂತ್ರಿಗಳು ಘೋಷಿಸಿದ್ದರು.

ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಎಲ್ಲಾ ಸಿಬ್ಬಂದಿಗೆ ಕರ್ತವ್ಯ (KAAMS) ಮೊಬೈಲ್ ಅಪ್ಲಿಕೇಶನ್ ಮೂಲಕ ಹಾಜರಾತಿಯನ್ನು ನಿರ್ವಹಿಸಲು ಪ್ರಸ್ತಾಪಿಸಲಾಗಿದ್ದು, ರಾಜ್ಯ ಸರ್ಕಾರಿ ನೌಕರರು ಮೊಬೈಲ್ ಅಪ್ಲಿಕೇಶನ್ ಅನ್ನು ಡೌನೋಡ್ ಮಾಡಿಕೊಳ್ಳಬಹುದು ಮತ್ತು ಕರ್ತವ್ಯ (KAAMS) ಮೊಬೈಲ್ ಅಪ್ಲಿಕೇಶನ್ ಬಳಸಿ HRMS ನಲ್ಲಿ ನೊಂದಾಯಿತ ಪ್ರಥಮ ಕೆಜಿಐಡಿ ಸಂಖ್ಯೆಯೊಂದಿಗೆ ನೊಂದಣಿ ಮಾಡಿಕೊಂಡು ತಮ್ಮ ಕರ್ತವ್ಯದ ಸ್ಥಳದಲ್ಲಿ ಹಾಜರಾತಿ ಗುರುತಿಸಬಹುದಾಗಿರುತ್ತದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಜ್ಯ ಸರ್ಕಾರದ ಅತಿ ದೊಡ್ಡ ಇಲಾಖೆಯಾಗಿದ್ದು, ರಾಜ್ಯದಾದ್ಯಂತ ಇರುವ ಸರ್ಕಾರಿ ಪ್ರಾಥಮಿಕ, ಪ್ರೌಢ, ಪದವಿಪೂರ್ವ ಶಿಕ್ಷಣ ಸಂಸ್ಥೆಗಳು, ಡಯಟ್, ಸಿ.ಟಿ.ಇ, ಮತ್ತು ಇತರೆ ಕಚೇರಿಗಳಲ್ಲಿ ಹೆಚ್ಚಿನ ಸಂಖ್ಯೆಯ ಖಾಯಂ ಶಿಕ್ಷಕರು ಮತ್ತು ಉಪನ್ಯಾಸಕರು ಹಾಗೂ ತತ್ಸಮಾನ ವೃಂದದ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಭೌತಿಕ ಅಥವಾ ವಿಕೇಂದ್ರೀಕೃತ ಕಾರ್ಯವಿಧಾನದ ಮೂಲಕ ನಿರ್ವಹಿಸಲಾಗುತ್ತಿ ರುವ ಹಾಜರಾತಿಯ ಮೇಲ್ವಿಚಾರಣೆಯು ಆಡಳಿತಾತ್ಮಕವಾಗಿ ಸಮರ್ಥತೆ ಮತ್ತು ಸಮಂಜಸತೆಯನ್ನು ಹೊಂದಿರುವುದಿಲ್ಲ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಶಿಕ್ಷಣದ ಗುಣಮಟ್ಟದಲ್ಲಿ ಸುಧಾರಣೆ, ಸರ್ಕಾರದ ನೀತಿ ಮತ್ತು ಶೈಕ್ಷಣಿಕ ಸುಧಾರಣೆಗಳ ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿ  ಕೊಳ್ಳಲು ಶಿಕ್ಷಕರು, ಉಪನ್ಯಾಸಕರು ಮತ್ತು ತತ್ಸಮಾನ ವೃಂದದ ಅಧಿಕಾರಿಗಳು ಸಿಬ್ಬಂದಿಗೆ ನಿರಂತರ ವೃತ್ತಿಪರ ಅಭಿವೃದ್ಧಿಗೆ ಒತ್ತು ನೀಡುತ್ತದೆ ಮತ್ತು ವಿಷಯ ಜ್ಞಾನ, ಶೈಕ್ಷಣಿಕ ಕೌಶಲ್ಯಗಳು ಮತ್ತು ವೃತ್ತಿಪರ ಸಾಮರ್ಥ್ಯಗಳನ್ನು ಉನ್ನತೀಕರಿಸಲು ತರಬೇತಿ ಕಾರ್ಯ ಕ್ರಮಗಳನ್ನು ವಿನ್ಯಾಸಗೊಳಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ತರಬೇತಿ ಕಾರ್ಯಕ್ರಮಗಳನ್ನು ರಾಜ್ಯ, ಜಿಲ್ಲೆ ಮತ್ತು ಬ್ಲಾಕ್ ಹಂತದ ವಿವಿಧ ಕೇಂದ್ರಗಳಲ್ಲಿ ನಡೆಸಲಾಗುತ್ತಿದ್ದು, ತರಬೇತಿ ಕಾರ್ಯಕ್ರಮ ದಲ್ಲಿ ಖಾಯಂ ಶಿಕ್ಷಕರು, ಖಾಯಂ ಉಪನ್ಯಾಸಕರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಹಾಗೂ ತತ್ಸಮಾನದ ವೃಂದದ ಖಾಯಂ ಅಧಿಕಾರಿಗಳು ಸಿಬ್ಬಂದಿಯ ಉಪಸ್ಥಿತಿಯನ್ನು ಖಚಿತಪಡಿಸಿ  ಕೊಳ್ಳಬೇಕಿರುತ್ತದೆ.

 

 

ಕರ್ತವ್ಯ (Kartavya) ಮೊಬೈಲ್ ಅಪ್ಲಿಕೇಷನ್ ಮೂಲಕ ಸಿಬ್ಬಂದಿಯ ಮುಖಚಹರೆ ಪರಿಶೀಲನೆಯೊಂದಿಗೆ ಸುರಕ್ಷಿತ ಲಾಗಿನ್ ಮೂಲಕ ಅಧಿಕೃತ ಖಾಯಂ ಸಿಬ್ಬಂದಿಯ ಹಾಜರಾತಿ ಯನ್ನು ಗುರುತಿಸುವುದನ್ನು ಖಚಿತಪಡಿಸುತ್ತದೆ ಹಾಗೂ ಸುಧಾರಿತ ಹಾಜರಾತಿ ಡ್ಯಾಶ್‌ಬೋರ್ಡ್ ಮತ್ತು ವರದಿಗಳನ್ನು ತ್ವರಿತವಾಗಿ ಸಂಸ್ಥೆಯ ಮುಖ್ಯಸ್ಥರಿಗೆ ಒದಗಿಸುತ್ತದೆ. ಅಕ್ರಮ ಮತ್ತು ತಿದ್ದುಪಡಿಗೆ ಅವಕಾಶವಿಲ್ಲದಂತೆ ಹಾಜರಾತಿಯನ್ನು ಗುರುತಿಸಲು ಅತ್ಯಾಧುನಿಕ ತಂತ್ರಜ್ಞಾನಗಳ (ಜಿಐಎಸ್ ಮತ್ತು ಕೃತಕ ಬುದ್ಧಿಮತ್ತೆ ಬಳಕೆಯನ್ನು ಉತ್ತೇಜಿಸುತ್ತದೆ ಮತ್ತು ಈ ಮೂಲಕ ಇಲಾಖೆಯ ಅಧಿಕಾರಿಗಳಿಗೆ ಸುಧಾರಿತ ಹಾಜರಾತಿ ಡ್ಯಾಶ್‌ಬೋರ್ಡ್ ಮೂಲಕ ವರದಿಗಳನ್ನು ಒದಗಿಸುತ್ತದೆ.

KAAMS ವ್ಯವಸ್ಥೆಯು ಕ್ಷೇತ್ರ ಮಟ್ಟದ ಅಧಿಕಾರಿಗಳಿಗೆ ವರದಿ ಯನ್ನು ಒದಗಿಸುವ ಮೂಲಕ ಪರಿಣಾಮಕಾರಿ ಮತ್ತು ಕೇಂದ್ರೀಕೃತವಾಗಿ ಮೇಲ್ವಿಚಾರಣೆಯನ್ನು ಮಾಡಲು ಅವಕಾಶ ಕಲ್ಪಿಸುತ್ತದೆ. ಆಡಳಿತಾತ್ಮಕ ನಿಯಂತ್ರಣ, ನಿಯೋಜನೆ, ಯೋಜನೆ, ವೇತನ ಪ್ರಕ್ರಿಯೆ ಮತ್ತು ಶಿಸ್ತು ಮೇಲ್ವಿಚಾರಣೆಗೆ ಅಗತ್ಯವಿರುವ ನಿಖರವಾದ ಹಾಜರಾತಿ ವರದಿಗಳನ್ನು ಒದಗಿಸುವ ಮೂಲಕ ಇದು ದತ್ತಾಂಶ ಚಾಲಿತ ನಿರ್ಧಾರ ತೆಗೆದು ಕೊಳ್ಳುವಿಕೆ ಯನ್ನು ಬೆಂಬಲಿಸುತ್ತದೆ. ಸದರಿ ವ್ಯವಸ್ಥೆಯು ಉತ್ತರದಾಯಿ ತ್ವವನ್ನು ಬಲಪಡಿಸಲಿದ್ದು ಸಮಯಪ್ರಜ್ಞೆ ಮತ್ತು ಸಾಂಸ್ಥಿಕ ಶಿಸ್ತನ್ನು ಸುಧಾರಿಸುತ್ತದೆ ಮತ್ತು ದತ್ತಾಂಶ ಆಧಾರಿತ ನಿರ್ಧಾರ ತೆಗೆದು ಕೊಳ್ಳುವಿಕೆಯನ್ನು ಬೆಂಬಲಿಸುತ್ತದೆ ಹಾಗೂ ಈ ವ್ಯವಸ್ಥೆಯು ಹಾಜರಾತಿಯನ್ನು ನೈಜ ಸಮಯದಲ್ಲಿ ಸೆರೆಹಿಡಿಯುವುದನ್ನು ಖಾತ್ರಿಪಡಿಸುತ್ತದೆ ಹಾಗೂ ಭೌತಿಕ ಹಸ್ತಕ್ಷೇಪವನ್ನು ಕಡಿಮೆ ಮಾಡುತ್ತದೆ.

ರಾಜ್ಯ ಸರ್ಕಾರದ ಡಿಜಿಟಲ್ ಆಡಳಿತ, ಪಾರದರ್ಶಕತೆ ಮತ್ತು ಆಡಳಿತಾತ್ಮಕ ದಕ್ಷತೆಯ ಉದ್ದೇಶಗಳಿಗೆ ಅನುಗುಣವಾಗಿ ಕರ್ತವ್ಯ (Kartavya) ಮೊಬೈಲ್ ಆಪ್ ಅನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಖಾಯಂ ಶಿಕ್ಷಕರು, ಖಾಯಂ ಉಪನ್ಯಾಸಕರು, ತತ್ರಮಾನದ ವೃಂದದ ಖಾಯಂ ಅಧಿಕಾರಿ ಸಿಬ್ಬಂದಿಗೆ ಮತ್ತು ಎಲ್ಲಾ ಖಾಯಂ ಬೋಧಕೇತರ ಸಿಬ್ಬಂದಿಯ ಹಾಜರಾತಿಯನ್ನು ಗುರುತಿಸಲು ಮತ್ತು ಮೇಲ್ವಿಚಾರಣೆ ಮಾಡಲು ಕರ್ತವ್ಯ(Kartavya) ಮೊಬೈಲ್ ಆಪ್ ಮೂಲಕ ಹಾಜರಾತಿ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸುವುದು ಆಡಳಿತಾತ್ಮಕವಾಗಿ ಮತ್ತು ಸಾರ್ವಜನಿಕ ಹಿತಾಸಕ್ತಿಯಿಂದ ಅತ್ಯಗತ್ಯವಾಗಿರುತ್ತದೆ.

 

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.