ಧಾರವಾಡ –
ವ್ಯಕ್ತಿಯೊಬ್ಬನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ಧಾರವಾಡದ ಕವಲಗೇರಿ ಗ್ರಾಮದಲ್ಲಿ ನಡೆದಿದೆ. ಹೌದು ಕಲ್ಲಿನಿಂದ ಜಜ್ಜಿ ವ್ಯಕ್ತಿಯನ್ನು ಕೊಲೆ ಮಾಡಿದ್ದು ಗ್ರಾಮದ ಜಮೀನೊಂದರಲ್ಲಿ ನಡೆದಿದೆ.ಕವಲಗೇರಿ ಗ್ರಾಮದ ಹೊರವಲಯದ ಜಮೀನಿನಲ್ಲಿ ಈ ಒಂದು ಘಟನೆ ನಡೆದಿದೆ

ಪ್ರಕಾಶ ದೇಶದ (48) ಕೊಲೆಯಾದ ವ್ಯಕ್ತಿಯಾಗಿದ್ದು ಧಾರವಾಡ ತಾಲೂಕು ಅಮ್ಮಿನಬಾವಿ ಗ್ರಾಮದ ನಿವಾಸಿ ಯಾಗಿದ್ದು ಬೆಳಗ್ಗೆ ಕೊಲೆ ನಡೆದಿರೋ ಶಂಕೆಯನ್ನು ವ್ಯಕ್ತಪ ಡಿಸಲಾಗಿದೆ.ಜಮೀನಿಗೆ ರೈತರು ಬಂದಾಗ ಈ ಒಂದು ಚಿತ್ರಣವು ಕಂಡು ಬಂದಿದ್ದು ಶವವನ್ನು ನೋಡಿದ ಕೂಡಲೇ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ.
ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು ಈ ಕುರಿತಂತೆ ದೂರನ್ನು ದಾಖಲು ಮಾಡಿಕೊಂಡಿರುವ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.