ಬೆಂಗಳೂರು –
ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀದೇವಿ ಅವರನ್ನು ವಜಾಗೊಳಿಸ ಲಾಗಿದೆ.ಹೌದು 2014 ರಲ್ಲಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಯುಜಿಸಿ ನಿಯಮ ಗಾಳಿಗೆ ತೂರಿ ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿ ನಡೆಸಲಾ ಗಿತ್ತು ಎಂಬ ಆರೋಪ ಕೇಳಿ ಬಂದಿದೆ.ಈ ಹಿನ್ನೆಲೆಯಲ್ಲಿ ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಪಕಿ ಶ್ರೀದೇವಿ ಅವರನ್ನು ವಜಾಗೊಳಿಸಲಾಗಿದೆ.

ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದ್ದು, ಈ ಹಿನ್ನೆಲೆಯಲ್ಲಿ ಇಂಗ್ಲಿಷ್ ಪ್ರಾಧ್ಯಾಪಕಿ ಶ್ರೀದೇವಿ ಅವರನ್ನು ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ.ಸಧ್ಯಅಮಾನತು ಮಾಡಲಾಗಿದ್ದು ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.






















