ತುಮಕೂರು –
ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ರಂಗಾಪುರದ ಸರ್ಕಾರಿ ಪ್ರಾಥಮಿಕ ಶಾಲೆ ಮತ್ತು ಆವರಣವನ್ನು ಸ್ವಚ್ಛ ಗೊಳಿಸುವ ಶ್ರಮದಾನ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡರು.ರಂಗಾಪುರದ ಗ್ರಾಮಸ್ಥರು,ಎಸ್‌ಡಿಎಂಸಿ ಸದಸ್ಯರು, ಸ್ಥಳೀಯರು ಹಾಗೂ ಬೋಧಕ ಮತ್ತು ಬೋಧ ಕೇತರ ಸಿಬ್ಬಂದಿಯೊಂದಿಗೆ ಶಾಲೆ ಆವರಣವನ್ನು ಸ್ವಚ್ಛಗೊ ಳಿಸಿ ಗಿಡಗಳನ್ನು ನೆಟ್ಟರು.

ಮಕ್ಕಳನ್ನು ಸಂಭ್ರಮದಿಂದ ಶಾಲೆಗೆ ಸ್ವಾಗತಿಸಬೇಕು ಎಂದು ಕರೆ ನೀಡಿದರು.ಶಾಲೆಗೆ ಭೇಟಿ ನೀಡಿದ ಸುಕ್ಷೇತ್ರ ಕೆರೆಗೋಡಿ-ರಂಗಾಪುರ ಶ್ರೀ ಗುರು ಪರದೇಶಿಕೇಂದ್ರ ಮಹಾಸ್ವಾಮೀಜಿ ಅವರು ಶಾಲಾರಂಭಕ್ಕೆ ಶುಭ ಹಾರೈಸಿ ದರು.ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.





















