ಮೈಸೂರು –
ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಮೈಸೂರು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಒಂದು ದಿನದ ರಜೆಯನ್ನು ಘೋಷಣೆ ಮಾಡಲಾಗಿದೆ.ಹೌದು ಮೈಸೂರಿನ ಡಿಡಿಪಿಐ ರಾಮಚಂದ್ರರಾಜೇ ಅರಸ್ ಅವರು ರಜೆಯನ್ನು ಘೋಷಿಸಿ ಆದೇಶಿಸಿದ್ದಾರೆ.ಮುಂದಿನ ರಜಾದಿನಗಳಲ್ಲಿ ಒಂದು ದಿನ ಕಾರ್ಯ ನಿರ್ವಹಿಸಲು ಶಾಲೆಗಳಿಗೆ ಸೂಚಿಸ ಲಾಗಿದೆ.ಮಳೆ ಹಿನ್ನೆಲೆ ಜಿಲ್ಲಾದ್ಯಂತ ಅಂಗನವಾಡಿಗಳಿಗೂ ರಜೆಯನ್ನು ನೀಡಿದ್ದು ಹಾಗೂ 1ರಿಂದ 10 ನೇ ತರಗತಿ ಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆಗಳಿಗೂ ಈ ಆದೇಶ ಅನ್ವಯವಾಗಲಿದೆ. ಜಿಲ್ಲೆಯಲ್ಲಿ ಮೇ 19ರಂದು ಭಾರೀ ಮಳೆ ಬೀಳುತ್ತಿರುವ ಹಿನ್ನೆಲೆ ಹವಾಮಾನ ಇಲಾಖೆ ಹೈ ಅಲರ್ಟ್ ಘೋಷಿಸಿದೆ.ನಿನ್ನೆ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಮೈಸೂರು ಜಿಲ್ಲೆಯ ಎಲ್ಲ ಶಾಲೆಗಳಿಗೆ ಹಾಗೂ ಅಂಗನವಾ ಡಿಗಳಿಗೆ ಒಂದು ದಿನದ ಮಟ್ಟಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.