ಸುತಗಟ್ಟಿ –
ಸುತಗಟ್ಟಿ ನಿರ್ಜನ ಪ್ರದೇಶದಲ್ಲಿ ನಡೆಯಿತು ಕೊಲೆ ಪ್ರೀತಿಯೇ ಕಾರಣವಾಯ್ತಾ ಯುವಕನ ಹತ್ಯೆಗೆ ಹೌದು ಕ್ಷುಲ್ಲಕ ಕಾರಣಕ್ಕಾಗಿ ಯುವಕನೋರ್ವನನ್ನು ಕೊಲೆ ಮಾಡಿ ರುವ ಘಟನೆ ಹುಬ್ಬಳ್ಳಿಯ ನವನಗರದ ಸುತಗಟ್ಟಿಯ ನಿರ್ಜನ ಪ್ರದೇಶದಲ್ಲಿ ನಡೆದಿದೆ.

ಹಳೇ ಹುಬ್ಬಳ್ಳಿಯ ವಿನಯ ಎಂಬಾತನೇ ಕೊಲೆಯಾದ ದುರ್ದೈವಿ ಎಂದು ತಿಳಿದುಬಂದಿದೆ.ಸ್ಥಳೀಯರ ಮಾಹಿತಿ ಪ್ರಕಾರ ಪ್ರೀತಿ ವಿಷಯಕ್ಕೆ ಸಂಬಂಧಿಸಿದಂತೆ ಕೊಲೆ ಮಾಡ ಲಾಗಿದೆ ಎಂದು ಶಂಕಿಸಲಾಗಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಇನ್ನೂ ಈ ಕುರಿತು ನವನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾ ಗಿದ್ದು ಕೊಲೆ ಮಾಡಿದ ದುಷ್ಕರ್ಮಿಗಳನ್ನು ವಶಕ್ಕೆ ಪಡೆದು ಕೊಳ್ಳಲು ಪೊಲೀಸರು ಬಲೆ ಬೀಸಿದ್ದಾರೆ.