ಬೆಂಗಳೂರು –
ಬೆಂಗಳೂರಿನಲ್ಲಿ ನಡೆದ ಶಾಲಾ ಬಸ್ ಅಪಘಾತ ನಡೆದ ನಂತರ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಹೌದು ಒಂದು ಕಡೆಗೆ ಅಪಘಾತದ ಸುದ್ದಿ ತಿಳಿದು ಪೊಲೀ ಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.ದುರ್ಘಟನೆ ಬಳಿಕ ಖಾಸಗಿ ಶಾಲಾ ಬಸ್ ಚಾಲಕ ಸ್ಥಳದಲ್ಲೇ ಬಸ್ ಬಿಟ್ಟು ಪರಾರಿಯಾಗಿದ್ದಾನೆ.

ಇನ್ನೂ ಅಪಘಾತದ ನಂತರ ಬಸ್ ನಲ್ಲಿದ್ದ ಮಕ್ಕಳನ್ನು ಶಾಲೆಗೆ ಕಳಹಿಸಲು ಪರ್ಯಾಯ ವ್ಯವಸ್ಥೆ ಮಾಡಿ ಆ ಬಸ್ ಜಪ್ತಿ ಮಾಡಲಾಗಿದೆ.ಚಾಲಕನ ಬಗ್ಗೆ ಮಾಹಿತಿ ಲಭ್ಯವಾ ಗಿದ್ದು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದು ಖಾಸಗಿ ಬಸ್ ಚಾಲಕನ ಅತಿ ಯಾದ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾ ತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಸಂಬಂಧ ಬನಶಂಕರಿ ಸಂಚಾರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ ಅಧಿಕಾರಿಗಳು ತಿಳಿಸಿದ್ದಾರೆ.





















