ಬೆಂಗಳೂರು –
ವಿಧಾನ ಸೌಧ ದ ಪ್ರಮುಖ ಮೂರು ಹುದ್ದೆಗಳಲ್ಲಿ ಮಹಿಳೆ ಯರೇ ನೇಮಕಗೊಂಡಿರುವುದರಿಂದ ಇನ್ನು ಮುಂದೆ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಮಹಿಳಾಮಣಿಗಳ ದರ್ಬಾರ್ ಆರಂಭವಾಗಲಿದೆ.ಹೌದು ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಾಲಿ ಅಭಿವೃದ್ಧಿ ಆಯುಕ್ತೆ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.
ಇದರ ಜೊತೆಗೆ ವಿಧಾನಸಭೆಯ ಕಾರ್ಯದರ್ಶಿಯಾಗಿರುವ ಎಂ.ಕೆ.ವಿಶಾಲಾಕ್ಷಿ ಮತ್ತೊಂದು ಕಡೆ ವಿಧಾನಪರಿಷತ್ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷಿ ಕೂಡ ಪ್ರಮುಖ ಹುದ್ದೆ ಯಲ್ಲಿರುವುದರಿಂದ ಶಕ್ತಿ ಕೇಂದ್ರದ ಮೂರು ಹುದ್ದೆಗಳಲ್ಲಿ ನಾರಿಯರದೇ ದರ್ಬಾರ್ ಶುರುವಾಗಲಿದೆ.ವಂದಿತಾ ಶರ್ಮಾ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದೊಡನೆಯೇ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಇರುವ ಮೂರೂ ಪ್ರಮುಖ ಹುದ್ದೆಗಳ ನ್ನು ಮಹಿಳೆಯರೇ ಅಲಂಕರಿಸಿದಂತಾಗುತ್ತದೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಈ ಹಿಂದೆ 2000 ನೇ ಇಸವಿಯಲ್ಲಿ ತೆರೇಸಾ ಭಟ್ಟಾಚಾರ್ಯ 2006 ನೇ ಇಸವಿಯಲ್ಲಿ ಮಾಲತಿ ದಾಸ್ ಹಾಗೂ 2017 ನೇ ಇಸವಿಯಲ್ಲಿ ಕೆ.ರತ್ನ ಪ್ರಭ ಅವರೂ ಅಲಂಕರಿಸಿದ್ದರು.
ಕೆ.ರತ್ನಪ್ರಭ ಅವರ ಅಧಿಕಾರಾವಧಿಯಲ್ಲಿ ರಾಜ್ಯ ಪೋಲಿಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಹುದ್ದೆಯನ್ನು ನೀಲಮಣಿ ಎನ್.ರಾಜು ಅಲಂಕರಿಸಿದಾಗ ಎರಡು ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರೇ ಇದ್ದಾರೆ ಎಂಬುದು ಗಮನಾರ್ಹ ಅಂಶವಾಗಿತ್ತು.
ಶಕ್ತಿಸೌಧದಲ್ಲಿ ಪ್ರಮುಖ ಹುದ್ದೆಗಳನ್ನು ಮಹಿಳೆಯರು ಅಲಂಕರಿಸುವ ಮೂಲಕ ರಾಜ್ಯದ ಆಡಳಿತ ಚುಕ್ಕಾಣಿ ಮಹಿಳೆಯರ ಕೈಯಲ್ಲಿ ಸಿಕ್ಕಂತ್ತಾಗಿದೆ.ಈ ಮೂಲಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ರಾಜ್ಯ ವಿಧಾನಸಭೆಯ ಕಾರ್ಯದರ್ಶಿಎಂ.ಕೆ.ವಿಶಾಲಾಕ್ಷಿ ಹಾಗೂ ರಾಜ್ಯ ವಿಧಾನಪರಿಷತ್ ಕಾರ್ಯದರ್ಶಿ ಕೆ.ಆರ್ ಮಹಾ ಲಕ್ಷ್ಮಿ ಶಕ್ತಿ ಕೇಂದ್ರದ ಶಕ್ತಿಯಾಗಿ ಹೊಸ ದಾಖಲೆ ಸ್ಥಾಪಿಸ ಲಿದ್ದಾರೆ.ಅಧಿಕಾರ ಪುರುಷರ ಕೈಯಲ್ಲಿ ಇರಬೇಕು ಎಂಬ ಪುರುಷ ಪ್ರಧಾನ ಮನಸ್ಥಿತಿಗೆ ರಾಜ್ಯದ ಶಕ್ತಿಸೌಧದ ಸದ್ಯದ ವಾತಾವರಣ ಉತ್ತರ ಕೊಟ್ಟಿದೆ.ಮಹಿಳಾಸಬಲೀಕರಣಕ್ಕೂ ಇದು ಮತ್ತಷ್ಟು ಸೂರ್ತಿಯಾಗಲಿದೆ ಎಂದರೆ ತಪ್ಪಾಗಲಾ ರದು.