ರಾಯಚೂರು –
ರಾಜ್ಯದ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ರಚನೆ ಕುರಿತು ರಾಜ್ಯದ ಸರ್ಕಾರಿ ನೌಕರರು ಮತ್ತೆ ಧ್ವನಿ ಎತ್ತಿದ್ದಾರೆ ಹೌದು ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಗಳ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚಿಸಬೇಕೆಂ ದು ಒತ್ತಾಯವನ್ನು ಮಾಡಿದ್ದಾರೆ.ರಾಯಚೂರಿನಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಜಿಲ್ಲಾ ಘಟಕದ ಪದಾಧಿಕಾ ರಿಗಳು ಹಾಗೂ ಸದಸ್ಯರು ಆಗ್ರಹಿಸಿ ದರು.ನಗರದಲ್ಲಿ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿ ಮೂಲಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು.ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯಲು ಅನುವಾಗುವಂತೆ ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ 2.80 ಲಕ್ಷ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ನಿಶ್ಚಿತ ಪಿಂಚಣಿ ಮರುಸ್ಥಾಪಿಸಬೇಕೆಂದು ಒತ್ತಾಯವನ್ನು ಮಾಡಿದರು.