ಬೆಂಗಳೂರು –
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿದ್ದ ರವಿಕುಮಾರ್ ನಿವೃತ್ತಿ ಬೆನ್ನಲ್ಲೇ ಹಿರಿಯ ಅಧಿಕಾರಿ ವಂದಿತಾ ಶರ್ಮಾ ಅಧಿಕಾರ ಸ್ವೀಕರಿಸಿದ್ದಾರೆ.ಹೌದು ಇಂದು
ಪಿ ರವಿಕುಮಾರ್ ಅವರ ವಯೋ ನಿವೃತ್ತಿಯಿಂದ ತೆರವಾದ ಹುದ್ದೆಗೆ ಕರ್ನಾಟಕ ವೃಂದದ ಭಾರತೀಯ ಆಡಳಿತ ಸೇವೆಯ 1986 ನೇ ಸಾಲಿನ ತಂಡದ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿತ್ತು.

ಇದೀಗ ಮುಖ್ಯಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿ ಸಿದ್ದು ಈ ಮೂಲಕ ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.