ಹಾವೇರಿ –
ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಗಂಭೀರ ಆರೋಪವೊಂದು ಕೇಳಿ ಬಂದಿದೆ ಹೌದು ನಿಂಗಪ್ಪ ಕಲಕೋಟಿ ಎಂಬುವವರು ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.ಅಲ್ಲದೆ ಸಧ್ಯ ವಿದ್ಯಾರ್ಥಿನಿ ಗರ್ಭಿಣಿ ಕೂಡಾ ಆಗಿದ್ದು ಹೀಗಾಗಿ ದೂರು ದಾಖಲಾದ ಹಿನ್ನೆಲೆಯಲ್ಲಿ ಇವರನ್ನು ಬಂಧನ ಮಾಡಲಾಗಿದೆ.
ಸಮಾಜದಲ್ಲಿ ಗುರುವಿಗೆ ದೊಡ್ಡ ಸ್ಥಾನ ಮಾನ ಗೌರವ ಇದೆ ಆದ್ರೆ ಇಲ್ಲೊಬ್ಬ ಪ್ರಾಧ್ಯಾಪಕ ಗುರುವಿನ ಮೇಲಿನ ಗೌರವಕ್ಕೆ ಧಕ್ಕೆ ತರುವಂತಹ ಕೆಲಸ ಮಾಡಿದ್ದಾರೆ.ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಮೇಲೆ ಸಹಾಯಕ ಪ್ರಾಧ್ಯಾಪಕ ನಿಂದ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ.
ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ.ನಿಂಗಪ್ಪ ಕಲಕೋಟಿ ಎಂಬುವವರು ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಮನೆ ಯಲ್ಲಿ ಪಾಠ ಹೇಳಿಕೊಡುವುದಾಗಿ ಮನೆಗೆ ಕರೆಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ ಅಲ್ಲದೇ ಒಂದೂವರೆ ವರ್ಷಗಳಿಂದ ವಿದ್ಯಾರ್ಥಿನಿ ಮೇಲೆ ಏಳೆಂಟು ಬಾರಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪ ಕೇಳಿ ಬಂದಿದೆ.ಅಲ್ಲದೆ ಲೈಂಗಿನ ದೌರ್ಜನ್ಯ ಎಸಗಿದ್ದಲ್ಲದೆ ವಿದ್ಯಾರ್ಥಿನಿಗೆ ಜೀವ ಬೆದರಿಕೆ ಕೂಡ ಹಾಕಿದ್ದಾರಂತೆ.
ಆರೋಪಿ ನಿಂಗಪ್ಪ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ.ಇವರು ಎಸಗಿದ ಕೃತ್ಯ ದಿಂದ ಇಪ್ಪತ್ತೆರಡು ವರ್ಷದ ವಿದ್ಯಾರ್ಥಿನಿ ಮೂರು ತಿಂಗಳ ಗರ್ಭಿಣಿ ಆಗಿದ್ದಾರೆ.ವಿದ್ಯಾರ್ಥಿನಿಯನ್ನು ಹಾವೇರಿ ನಗರದ ಮಹಿಳಾ ಸಾಂತ್ವನ ಕೇಂದ್ರಕ್ಕೆ ದಾಖಲಿಸಲಾಗಿದೆ.ಸಹಾಯಕ ಪ್ರಾಧ್ಯಾಪಕ ನಿಂಗಪ್ಪ ಕಲಕೋಟಿ ವಿರುದ್ಧ ವಿದ್ಯಾರ್ಥಿನಿ ಯಿಂದ ಸವಣೂರು ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 376(2)(N) ಮತ್ತು 506 ಅಡಿ ದೂರು ದಾಖಲಾಗಿದೆ.