ಬೆಂಗಳೂರು –
ಹಿರಿಯ ನಾಗರಿಕರು ಸರ್ಕಾರಿ ಕಚೇರಿಗಳಿಗೆ ಕೆಲಸದ ನಿಮಿತ್ತ ಬಂದಾಗ ಅವರ ಜೊತೆ ಗೌರವದಿಂದ ವರ್ತಿಸ ಬೇಕು ಒಂದು ವೇಳೆ ಹಾಗೆ ವರ್ತಿಸದಿದ್ದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಿಬ್ಬಂದಿ ಹಾಗೂ ಆಡಳಿತಾ ಸುಧಾರಣೆ ಇಲಾಖೆ ಎಚ್ಚರಿಕೆ ನೀಡಿದೆ.
ಹೌದು ಹಿರಿಯ ನಾಗರಿಕರು ಸರ್ಕಾರಿ ಕಚೇರಿಗಳಿಗೆ ತಮ್ಮ ಕೆಲಸದ ನಿಮಿತ್ತ ಭೇಟಿ ನೀಡಿದಾಗ ಅವರೊಂದಿಗೆ ಗೌರವ ದಿಂದ ವರ್ತಿಸದೇ ಇದ್ದರೆಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಿಬ್ಬಂದಿ ಹಾಗೂ ಆಡಳಿತಾ ಸುಧಾರಣೆ ಇಲಾಖೆ ಎಚ್ಚರಿಕೆ ನೀಡಿದೆ.
ಹಿರಿಯ ನಾಗರಿಕರು ಸರ್ಕಾರಿ ಕಚೇರಿಗಳಿಗೆ ಕೆಲಸದ ನಿಮಿತ್ತ ಬಂದಾಗ ಆಸನದ ವ್ಯವಸ್ಥೆ ಮಾಡುವಂತೆ ಹಾಗೂ ಅವರುಗಳ ಮನವಿ,ಕೋರಿಕೆಗಳನ್ನು ಆದ್ಯತೆಯ ಮೇಲೆ ಪರಿಗಣಿಸಿ,ಇಲಾಖೆಗಳು ಕೈಗೊಂಡಿರುವ ಕ್ರಮಗಳ ಮಾಹಿತಿಯನ್ನು ಹಿರಿಯ ನಾಗರಿಕರಿಗೆ ತಲುಪಿಸುವ ವ್ಯವಸ್ಥೆಯನ್ನು ಮಾಡುವಂತೆ ಸ್ಪಷ್ಟ ನಿರ್ದೇಶನದೊಂದಿಗೆ ಕಳೆದ ಜೂನ್ 21ಕ್ಕೆ ಸುತ್ತೋಲೆ ಹೊರಡಿಸಲಾಗಿತ್ತು.
ಆದರೆ ಸರ್ಕಾರದ ಸುತ್ತೋಲೆಯನ್ನು ಪಾಲಿಸದೇ ಇರುವ ಬಗ್ಗೆ ಹಾಗೂ ಸರ್ಕಾರದ ನಿರ್ದೇಶನಗಳನ್ನು ಉಲ್ಲಂಘಿ ಸುತ್ತಿರುವ ಕುರಿತು ಹಿರಿಯ ನಾಗರಿಕರುಗಳಿಂದ ದೂರು ಗಳು ಸ್ವೀಕೃತವಾಗುತ್ತಿದೆ.ಈ ಹಿನ್ನೆಲೆ ಕಳೆದ ಜೂನ್ ನಲ್ಲಿ ಹೊರಡಿಸಲಾದ ಸುತ್ತೋಲೆಯನ್ನು ಅಕ್ಷರಶಃ ಪಾಲಿಸು ವಂತೆ ಸಚಿವಾಲಯದ ಎಲ್ಲ ಇಲಾಖೆಗಳು ತಮ್ಮ ಅಧೀನದ ಕಚೇರಿಗಳಿಗೆ ಸ್ಪಷ್ಟ ಸೂಚನೆ ನೀಡುವಂತೆ ಸೂಚಿಸಲಾಗಿದೆ.
ಇನ್ನು ಮುಂದೆ ಈ ಬಗ್ಗೆ ನಿರ್ದಿಷ್ಟ ದೂರುಗಳು ಸ್ವೀಕೃತವಾ ದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು.ಈ ನಿಟ್ಟಿನಲ್ಲಿ ಇಲಾಖಾ ಮುಖ್ಯಸ್ಥರು ತಮ್ಮ ಅಧೀನ ಇಲಾಖೆಗಳಿಗೆ ಮತ್ತು ಸಿಬ್ಬಂದಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಸೂಚಿಸಲಾಗಿದೆ.