ಧಾರವಾಡ –
ಪಠ್ಯ ಪರಿಷ್ಕರಣೆಯಲ್ಲಿ ತಪ್ಪಾಗಿದ್ದನ್ನು ನಾವು ಗಮನಿಸಿ ದ್ದೇವೆ.ಅದನ್ನು ಮರುಪರಿಷ್ಕರಣೆಗೆ ಮುಂದಾಗಿದ್ದೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.ಧಾರವಾಡ ದಲ್ಲಿ ಮಾತನಾಡಿದ ಅವರು ಪಠ್ಯ ಪರಿಷ್ಕರಣೆ ವಾದ-ವಿವಾದ ಮಕ್ಕಳ ಮೇಲೆ ಪರಿಣಾಮ ಬೀರಲ್ಲ.ಇನ್ನೊಂದು ತಿಂಗಳಲ್ಲಿ ಮಕ್ಕಳಿಗೆ ಪುಸ್ತಕ ಕೊಡುತ್ತೇವೆ.ಪಠ್ಯದಲ್ಲಿ ಹಲವು ಹೊಸ ವಿಚಾರ ಹಿನ್ನೆಲೆಯಲ್ಲಿ ಲೋಪದೋಷಗಳನ್ನು ಯಾರೇ ತೋರಿಸದ ರೂ ಸರಿ ಮಾಡುತ್ತೇವೆ ಎಂದರು.
ಇನ್ನು ಪಠ್ಯದಲ್ಲಿ ಸಾಹಿತಿಗಳನ್ನು ಯಾವುದೇ ರೀತಿಯಲ್ಲಿ ಕಡೆಗಣಿಸಿಲ್ಲ.ಮಹಾರಾಜರನ್ನು ತೆಗೆದು ಟಿಪ್ಪು ಸುಲ್ತಾನ ರನ್ನು ತರಲಾಗಿತ್ತು.ಸಿಂಧೂ ಸಂಸ್ಕೃತಿ ಕಿತ್ತುಹಾಕಿ ನೆಹರೂ ಪಾಠ ತರಲಾಗಿತ್ತು.ಇಸ್ಲಾಂ ಮತ್ತು ಕ್ರೈಸ್ತರನ್ನು ಮಾತ್ರ ಪುಸ್ತಕದಲ್ಲಿ ಸೇರಿಸಲಾಗಿತ್ತು ಎಂದರು.