This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಜೂನ್ 13 ರಂದು ಶಾಲಾ ಕಾಲೇಜು ಗಳಿಗೆ ರಜೆ – ವಿಶೇಷ ಸಾಂದರ್ಭಿಕ ರಜೆ ಘೋಷಣೆ ಮಾಡಿದ ರಾಜ್ಯ ಸರ್ಕಾರ ಆದೇಶ

WhatsApp Group Join Now
Telegram Group Join Now

ಬೆಂಗಳೂರು –

2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ವಿಧಾನ ಪರಿಷತ್ ಚುನಾವಣೆ 13-06-2022ರಂದು ನಡೆಯಲಿದೆ. ಈ ಹಿನ್ನಲೆಯಲ್ಲಿ ಅಂದು ರಾಜ್ಯ ಸರ್ಕಾರದಿಂದ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು ದಿನಾಂಕ 13-06-2022ರಂದು ವಿಧಾನಪರಿಷತ್ತಿನ ವಾಯುವ್ಯ ಪದವೀಧರ ಕ್ಷೇತ್ರ,ದಕ್ಷಿಣ ಪದವೀಧರ ಕ್ಷೇತ್ರ ಹಾಗೂ ವಾಯುವ್ಯ ಶಿಕ್ಷಕರ,ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ ಎಂದು ತಿಳಿಸಿದ್ದಾರೆ.

ಮತದಾನ ನಡೆಯಲಿರುವಂತ ವಾಯುವ್ಯ ಪದವೀಧರ ಕ್ಷೇತ್ರದ ವಿಜಯಪುರ,ಬಾಗಲಕೋಟೆ ಮತ್ತು ಬೆಳಗಾವಿ, ದಕ್ಷಿಣ ಪದವೀಧರ ಕ್ಷೇತ್ರದ ಮೈಸೂರು,ಚಾಮರಾಜನಗರ, ಮಂಡ್ಯ ಮತ್ತು ಹಾಸನ ಜಿಲ್ಲೆಗಳು,ವಾಯುವ್ಯ ಶಿಕ್ಷಕರ ಕ್ಷೇತ್ರದ ವಿಜಯಪುರ,ಬಾಗಲಕೋಟೆ ಮತ್ತು ಬೆಳಗಾವಿ, ಪಶ್ಚಿಮ ಶಿಕ್ಷಕರ ಕ್ಷೇತ್ರದ ಧಾರವಾಡ,ಹಾವೇರಿ,ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ನಡೆಯಲಿದೆ.

ಈ ಚುನಾವಣೆ ಕ್ಷೇತ್ರ ವ್ಯಾಪ್ತಿಯಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜು ಅನುದಾನಿತ, ಅನುದಾನ ರಹಿತ ವಿದ್ಯಾ ಸಂಸ್ಥೆಗಳು,ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು,ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕ್ ಗಳು ಸೇರಿದಂತೆ ಖಾಸಗಿ ಕಾರ್ಖಾನೆಗಳು,ಸಹಕಾರಿ ಸಂಘ ಸಂಸ್ಥೆಗಳು ಸೇರಿದಂತೆ ಎಲ್ಲಾವುಗಳಿಗೆ ಮತದಾನಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ದಿನಾಂಕ 13-06-2022ರ ಸೋಮವಾರದಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ, ಆದೇಶಿಸಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk