This is the title of the web page
This is the title of the web page

Live Stream

[ytplayer id=’1198′]

December 2024
T F S S M T W
 1234
567891011
12131415161718
19202122232425
262728293031  

| Latest Version 8.0.1 |

State News

ವರ್ಗಾವಣೆ ವಿಚಾರದಲ್ಲಿ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ವರ್ಗಾವಣೆ ವಿಚಾರದಲ್ಲಿ ಸಮಯಾವಕಾಶ ವಿಸ್ತರಣೆ…..

WhatsApp Group Join Now
Telegram Group Join Now

ಬೆಂಗಳೂರು –

ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ದಿನಾಂಕ 15-06-2022ರವರೆಗೆ ಅವಕಾಶ ನೀಡಲಾಗಿತ್ತು. ಇದೀಗ ರಾಜ್ಯ ಸರ್ಕಾರ ಮತ್ತೆ ದಿನಾಂಕವನ್ನು 30-06 2022 ರವರೆಗೆ ವಿಸ್ತರಿಸಿ ಆದೇಶಿಸಿದೆ.

ಈ ಹಿಂದೆ ರಾಜ್ಯ ಸರ್ಕಾರ ಶೇ.6ರಷ್ಟು ಮೀರದಂತೆ ಸರ್ಕಾರಿ ನೌಕರರ ವರ್ಗಾವಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿತ್ತು.ಅಲ್ಲದೇ ವರ್ಗಾವಣೆಯ ಹೊಣೆಗಾರಿಕೆಯನ್ನು ಆಯಾ ಇಲಾಖಾ ಸಚಿವರಿಗೆ ನೀಡಿ ಆದೇಶಿಸಿತ್ತು.ದಿನಾಂಕ 15-060-2022ರೊಳಗೆ ಮುಕ್ತಾಯಗೊಳಿಸುವಂತೆಯೂ ಸೂಚಿಸಲಾಗಿತ್ತು.

ಈಗ ಮತ್ತೆ ದಿನಾಂಕ 30-06-2022ರವರೆಗೆ ವರ್ಗಾವಣೆಗೆ ದಿನಾಂಕ ವಿಸ್ತರಿಸಿದೆ. 2022-23ನೇ ಸಾಲಿನ ಸಾರ್ವತ್ರಿಕ ವರ್ಗಾವಣಾ ಅವಧಿಯನ್ನು ದಿನಾಂಕ 30-06-2022 ರವರೆಗೆ ವಿಸ್ತರಿಸಲಾಗಿದೆ ಎಂಬುದಾಗಿ ತಿಳಿಸಿದೆ.

2022-23ನೇ ಸಾಲಿಗೆ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್ ಸಿ ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ,ನೌಕರರಿಗೆ ಅನ್ವಯ ವಾಗುವಂತೆ ಒಂದು ಜೇಷ್ಠತಾ ಘಟದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ನ್ನು ಮೀರದಂತೆ ಸಾರ್ವತ್ರಿಕ ವರ್ಗಾ ವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಿಸಲಾಗಿದೆ ದಿನಾಂಕ 30-04-2022ರ ಆದೇಶದಲ್ಲಿ ತಿಳಿಸಿತ್ತು.

ಶೇ.6ರಷ್ಟು ಗ್ರೂಪ್-ಎ, ಬಿ, ಸಿ ಮತ್ತು ಡಿ ವರ್ಗದ ಅಧಿಕಾರಿ ನೌಕರಿಗೆ ಅನ್ವಯವಾಗುವಂತೆ ದಿನಾಂಕ 01-05-2022 ರಿಂದ ದಿನಾಂಕ 15-06-2022ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು ಇದೀಗ ದಿನಾಂಕ 30-06-2022ರವರೆಗೆ ವಿಸ್ತರಿಸಿ ಆದೇಶಿಸಿದೆ.


Google News

 

 

WhatsApp Group Join Now
Telegram Group Join Now
Suddi Sante Desk