ಬೆಂಗಳೂರು –
ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಯನ್ನು ನೀಗಿಸಲು ಶೀಘ್ರದಲ್ಲೇ 4 ಸಾವಿರಕ್ಕೂ ಹೆಚ್ಚು ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದ ವರಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಿಹಿಸುದ್ದಿ ನೀಡಿದರು ರಾಜ್ಯದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅಗತ್ಯವಿದ್ದ 30,606 ಅತಿಥಿ ಶಿಕ್ಷಕರ ಪೈಕಿ 22 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಇನ್ನೂ 4 ಸಾವಿರ ಅತಿಥಿ ಶಿಕ್ಷಕರನ್ನು ಶೀಘ್ರವೇ ನೇಮಕ ಮಾಡಿಕೊಳ್ಳಲಾಗು ವುದು ಎಂದರು.
ಇನ್ನೂ ರಾಜ್ಯದಲ್ಲಿ ಶೇ.70 ಪುಸ್ತಕ ಶಾಲೆಗಳಿಗೆ ಪೂರೈಕೆ ಯಾಗಿದ್ದು ಉಳಿದ ಶಾಲೆಗಳಿಗೆ ಆದಷ್ಟು ಬೇಗ ಪಠ್ಯ ಪುಸ್ತಕಗಳನ್ನು ತಲುಪಿಸಲಾಗುವುದು. ಈ ಸಂಬಂಧ ಕರ್ನಾಟಕ ಪಠ್ಯಪುಸ್ತಕ ಸಂಘದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.