ಬೆಂಗಳೂರು –
ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಕಡ್ಡಾಯವಾಗಿ ಸಂಬಳ ಪ್ಯಾಕೇಜ್‌ನಲ್ಲಿ ನೋಂದಾಯಿಸಿಕೊಳ್ಳಲು ನಿಗದಿಪಡಿಸ ಲಾಗಿದ್ದ ಕೊನೆಯ ದಿನಾಂಕವನ್ನು ಸರ್ಕಾರವು ವಿಸ್ತರಿಸಿ ಆದೇಶ ಹೊರಡಿಸಿದೆ ಆಗಸ್ಟ್ 31ರವರೆಗೆ ಈ ಒಂದು ಗಡುವನ್ನು ವಿಸ್ತರಣೆ ಮಾಡಲಾಗಿದೆ
ಸರ್ಕಾರದಿಂದ ನೇರವಾಗಿ ಅಥವಾ ಪರೋಕ್ಷವಾಗಿ ನೇಮಕ ಗೊಂಡಿರುವ ಎಲ್ಲಾ ‘ಎ’, ‘ಬಿ’, ‘ಸಿ’ ಮತ್ತು ‘ಡಿ’ ಗುಂಪಿನ ಅರ್ಹ ಅಧಿಕಾರಿಗಳು,ನೌಕರರು ಕಡ್ಡಾಯವಾಗಿ ಸಂಬಳ ಪ್ಯಾಕೇಜ್‌ನಲ್ಲಿ ನೋಂದಾಯಿಸಿಕೊಳ್ಳಲು ಈ ಮೊದಲು ಜೂನ್ 30, 2026 ರವರೆಗೆ ಅಂತಿಮ ಕಾಲಾವಕಾಶ ನೀಡಲಾಗಿತ್ತು. ಅಷ್ಟರೊಳಗೆ ನೋಂದಾಯಿಸಿಕೊಳ್ಳದ ನೌಕರರ ಸಂಬಳ ವಿತರಣೆಯನ್ನು ತಡೆಹಿಡಿಯಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿತ್ತು.
ಹಲವು ಅಧಿಕಾರಿಗಳು ಮತ್ತು ನೌಕರರು ನೋಂದಾಯಿಸಿ ಕೊಳ್ಳಲು ಇನ್ನು ಹೆಚ್ಚಿನ ಕಾಲಾವಕಾಶ ಕೋರಿದ್ದರಿಂದ, ಸರ್ಕಾರವು ನೌಕರರ ಹಿತದೃಷ್ಟಿಯಿಂದ ಈ ಅವಧಿಯನ್ನು ಇದೀಗ ಆಗಸ್ಟ್ 31, 2026 ರವರೆಗೆ ವಿಸ್ತರಿಸಿದೆ.ಈ ಕುರಿತು ಆರ್ಥಿಕ ಇಲಾಖೆಯ ಲೆಕ್ಕಾಧಿಕಾರಿಗಳಾದ ಎಸ್.ಆರ್. ನಳಿನಾ ಅವರು ಜೂನ್ 30, 2026 ರಂದು ಅಧಿಕೃತ ಪತ್ರದ ಮೂಲಕ ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ-2 (HRMS-2) ರ ಯೋಜನಾ ನಿರ್ದೇಶಕರಿಗೆ ಈ ಮಾಹಿತಿ ನೀಡಿದ್ದಾರೆ. ಎಲ್ಲಾ ಅರ್ಹ ನೌಕರರು ಈ ವಿಸ್ತರಿತ ಅವಧಿಯೊಳಗೆ ತಮ್ಮ ನೋಂದಣಿಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕಾಗಿದೆ ಎಂದು ಉಲ್ಲೇಖ ಮಾಡಿದ್ದಾರೆ.
ಅನಸೂಯಾ ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..



